ಮಡಿಕೇರಿ: ಪ್ರವಾಸಿಗರ ಮೇಲೆ ಹಲ್ಲೆ ಮಾಡಿ ಚಿನ್ನದ ಸರ ಎಗರಿಸಿ ಪರಾರಿಯಾಗಿರುವ ಘಟನೆ ನಡೆದಿದೆ.
ಈ ಘಟನೆ ಕೊಡಗು(Kodagu) ಜಿಲ್ಲೆಯಲ್ಲಿ ನಡೆದಿದೆ. ಕೋಟೆಬೆಟ್ಟ (Kotebetta) ಪ್ರವಾಸಕ್ಕೆಂದು ಆಗಮಿಸಿದ್ದ ಪ್ರವಾಸಿಗರ (Tourists) ಮೇಲೆ ಬೈಕ್ ನಲ್ಲಿ ಬಂದಿದ್ದ ಇಬ್ಬರು ಹಲ್ಲೆ ಮಾಡಿ ದೌರ್ಜನ್ಯ ಎಸಗಿ, ಚಿನ್ನದ ಸರ ಕಿತ್ತುಕೊಂಡು ಪರಾರಿಯಾಗಿದ್ದಾರೆ ಎನ್ನಲಾಗಿದೆ.
ಪುತ್ತೂರಿನಿ ಕುಟುಂಬವೊಂದು ಕೋಟೆಬೆಟ್ಟ ಪ್ರವಾಸಿ ತಾಣಕ್ಕೆ ಆಗಮಿಸಿತ್ತು. ಈ ಸಂದರ್ಭದಲ್ಲಿ ಮಕ್ಕಳು, ಮಹಿಳೆಯರು ಸೇರಿದಂತೆ ಎಲ್ಲರ ಮೇಲೆ ಹಲ್ಲೆ ಮಾಡಿದೆ ಎನ್ನಲಾಗಿದೆ. ಇಬ್ಬರು ಆರೋಪಿಗಳು ಸ್ಥಳೀಯ ಮಾದಾಪುರ ಹತ್ತಿರದ ನಿವಾಸಿಗಳು ಎಂಬ ವಿಚಾರ ಬೆಳಕಿಗೆ ಬಂದಿದೆ. ದೌರ್ಜನ್ಯಕ್ಕೆ ಒಳಗಾದವರು ಮಾದಾಪುರ ಉಪ ಠಾಣಾ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಈ ಕುರಿತು ಸೋಮವಾರಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.