ರಾಯಚೂರು: ಕಟ್ಟಡದ ಮೇಲಿಂದ ಜಿಗಿದು ಯುವತಿ (Young Woman) ಆತ್ಮಹತ್ಯೆ ಮಾಡಿಕೊಂಡಿರುವ ಘಟನೆಯೊಂದು ನಗರದ (Raichur) ದೇವರ ಕಾಲೋನಿಯಲ್ಲಿ ನಡೆದಿದೆ.
ಪ್ರೇಮ (Love) ವಿಚಾರ ಪೊಲೀಸ್ ಠಾಣೆಯ ಮೆಟ್ಟಿಲು ಏರಿದ್ದಕ್ಕೆ ಮನನೊಂದ ಯುವತಿ ಆತ್ಮಹತ್ಯೆಗೆ ಯತ್ನಿಸಿದ್ದಾಳೆ ಎನ್ನಲಾಗಿದೆ. ಯುವತಿಯನ್ನು ಕೂಡಲೇ ಆಸ್ಪತ್ರೆಗೆ ದಾಖಲಿಸಲಾಯಿತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾಳೆ. ಜಲಾಲನಗರದ ಅನುರಾಧ (19) ಸಾವನ್ನಪ್ಪಿದ ಯುವತಿ. ಕಟ್ಟಡದಿಂದ ಜಿಗಿದ ದೃಶ್ಯಾವಳಿ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.
ಅನುರಾಧ, ವಿನಯ ರೆಡ್ಡಿ ಎಂಬಾತನನ್ನು ಪ್ರೀತಿಸುತ್ತಿದ್ದಳು. ಯುವಕನೊಡನೆ ರಕ್ಷಣೆ ಕೋರಿ ಹಾಗೂ ಮದುವೆಗಾಗಿ ಜೂನ್ 20 ರಂದು ಮಾರ್ಕೆಟ್ ಯಾರ್ಡ್ ಪೊಲೀಸ್ ಠಾಣೆಗೆ ಹೋಗಿದ್ದರು. ಆದರೆ ಮದುವೆಗೆ ಯುವತಿ ಮನೆಯವರು ಒಪ್ಪಿಗೆ ನೀಡಿಲ್ಲ. ಹೀಗಾಗಿ ಯುವತಿಯನ್ನು ಪೊಲೀಸರು ಸ್ವಾಧಾರ ಕೇಂದ್ರಕ್ಕೆ ಕಳುಹಿಸಿದ್ದರು. ಆದರೆ, ಯುವತಿ ಅಲ್ಲಿಯೇ ಆತ್ಮಹತ್ಯೆಗೆ ಶರಣಾಗಿದ್ದಾಳೆ. ಈ ಕುರಿತು ನಗರದ ಪಶ್ಚಿಮ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.