ಬೆಂಗಳೂರು: ಅಸ್ವಾಭಾವಿಕ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಸೂರಜ್ ರೇವಣ್ಣಗೆ (Suraj Revanna) ಕೋರ್ಟ್ (Court) ನ್ಯಾಯಾಂಗ ಬಂಧನಕ್ಕೆ (Judicial Custody) ಒಪ್ಪಿಸಿ ಆದೇಶಿಸಿದೆ.
ಹಾಸನ (Hassana) ಹಿಮ್ಸ್ ನಲ್ಲಿ ಮೆಡಿಕಲ್ ಟೆಸ್ಟ್ ಗೆ (Medical Test) ಒಳಪಡಿಸಿದ ನಂತರ ಸೂರಜ್ ರನ್ನು ಬೆಂಗಳೂರಿನ (Bengaluru) ಕೋರಮಂಗಲದಲ್ಲಿರುವ 42ನೇ ಎಸಿಎಂಎಂ ನ್ಯಾಯಾಧೀಶರಾದ ಶಿವಕುಮಾರ್ ಎದುರು ಹಾಜರು ಪಡಿಸಿದ್ದರು. ಆದರೆ, ನ್ಯಾಯಾಧೀಶರು ಸೂರಜ್ ರೇವಣ್ಣರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ಆದೇಶ ಹೊರಡಿಸಿದರು.
ಅಲ್ಲದೇ, ಈ ಪ್ರಕರಣವನ್ನು ಈಗಾಗಲೇ ಸರ್ಕಾರ ಸಿಐಡಿಗೆ (CID) ವಹಿಸಿದೆ. ಅಧಿಕೃತವಾಗಿ ಸಿಐಡಿಗೆ ವರ್ಗಾವಣೆ ಆಗಿಲ್ಲ. ಹೀಗಾಗಿ ಇಂದು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಸೋಮವಾರ ಬಾಡಿವಾರೆಂಟ್ ಮೇಲೆ ಸಿಐಡಿ ವಶಕ್ಕೆ ಪಡೆಯುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ.
ಸಂತ್ರಸ್ತನ ವಿರುದ್ದ ನೀಡಿದ್ದ ದೂರಿಗೆ ಸಾಕ್ಷಿ ನೀಡುವ ಹಿನ್ನೆಲೆಯಲ್ಲಿ ಸೂರಜ್ ರೇವಣ್ಣ ಶನಿವಾರ ಸಂಜೆ ಹಾಸನದ ಸೆನ್ ಠಾಣೆಗೆ ಹೋಗಿದ್ದರು. ಈ ಸಂದರ್ಭದಲ್ಲಿ ಸೂರಜ್ ರೇವಣ್ಣರನ್ನು ವಶಕ್ಕೆ ಪಡೆದ ಹಾಸನ ಪೊಲೀಸರು ಮುಂಜಾನೆಯವರೆಗೂ ಸುದೀರ್ಘ ವಿಚಾರಣೆಗೆ ಒಳಪಡಿಸಿದ್ದಾರೆ. ಬೆಳಗ್ಗೆ ಸೂರಜ್‌ರನ್ನು ಅಧಿಕೃತವಾಗಿ ಬಂಧಿಸಿದ್ದಾರೆ. ಸಂತ್ರಸ್ತ ಯುವಕನಿಗೆ ಬೌರಿಂಗ್ ಆಸ್ಪತ್ರೆಯಲ್ಲಿ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ