ಭಾರತ ಮಹಿಳಾ ತಂಡ ಹಾಗೂ ದಕ್ಷಿಣ ಆಫ್ರಿಕಾ ಮಹಿಳಾ ತಂಡಗಳ ಮಧ್ಯೆ ನಡೆದ ಮೂರನೇ ಹಾಗೂ ಕೊನೆಯ ಏಕದಿನ ಪಂದ್ಯದಲ್ಲಿ ಭಾರತ ತಂಡ ಗೆದ್ದು ಬೀಗಿದೆ. ಈ ಮೂಲಕ ಸರಣಿ ವಶಕ್ಕೆ ಪಡೆದಿದೆ.
ಕೊನೆಯ ಏಕದಿನ ಪಂದ್ಯದಲ್ಲಿ ಆತಿಥೇಯ ಭಾರತೀಯ ಮಹಿಳಾ ತಂಡ 6 ವಿಕೆಟ್ ಗಳ ಸುಲಭ ಜಯ ದಾಖಲಿಸಿದೆ. ಈ ಮೂಲಕ ಮೂರು ಪಂದ್ಯಗಳ ಏಕದಿನ ಸರಣಿಯನ್ನು 3-0 ಅಂತರದಿಂದ ವಶಪಡಿಸಿಕೊಂಡಿದೆ.
ಇದಕ್ಕೂ ಮುನ್ನ ನಡೆದಿದ್ದ ಮೊದಲೆರಡು ಪಂದ್ಯಗಳಲ್ಲಿಯೂ ಭಾರತ ತಂಡ ಗೆಲುವು ಸಾಧಿಸಿತ್ತು. ಇದರೊಂದಿಗೆ ಇನ್ನೊಂದು ಪಂದ್ಯ ಬಾಕಿ ಇರುವಂತೆಯೇ ಸರಣಿಯನ್ನು ವಶಪಡಿಸಿಕೊಂಡಿತ್ತು. ಆದರೆ, ಕೊನೆಯ ಪಂದ್ಯವನ್ನೂ ಗೆದ್ದಿರುವ ಹರ್ಮನ್ಪ್ರೀತ್ ಪಡೆ ಸರಣಿ ವೈಟ್ ವಾಶ್ ಮಾಡಿದೆ.
ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ದಕ್ಷಿಣ ಆಫ್ರಿಕಾ ತಂಡ 50 ಓವರ್‌ಗಳಲ್ಲಿ 215 ರನ್ ಗಳಿಸಿತ್ತು. ಗುರಿ ಬೆನ್ನಟ್ಟಿದ ಟೀಂ ಇಂಡಿಯಾ ಸ್ಮೃತಿ ಮಂಧಾನ ಅವರ 90 ರನ್ ಗಳ ನೆರವಿನಿಂದ 56 ಎಸೆತಗಳು ಬಾಕಿ ಇರುವಂತೆಯೇ ಗೆಲುವಿನ ದಡ ಸೇರಿತು.