ಟಿ20 ವಿಶ್ವಕಪ್ ನ ಸೂಪರ್ 8ರಲ್ಲಿ ಆಸ್ಟ್ರೇಲಿಯಾ ವಿರುದ್ಧ ನಡೆದ ಪಂದ್ಯದಲ್ಲಿ ಭಾರತ ತಂಡದ ನಾಯಕ ರೋಹಿತ್ ಶರ್ಮಾ ಕೇವಲ 19 ಬೌಲ್ ಗಳಲ್ಲಿ ಅರ್ಧ ಶತಕ ಸಿಡಿಸಿ ಮಿಂಚಿದ್ದಾರೆ.
Daren Sammy National Cricket Stadiumನಲ್ಲಿ ಈ ಸಾಧನೆ ಮಾಡಿದ್ದಾರೆ. ಟಾಸ್ ಗೆದ್ದ ಆಸ್ಟ್ರೇಲಿಯಾ ನಾಯಕ ಮಿಚೆಲ್ ಮಾರ್ಷ್ ಟಾಸ್ ಗೆದ್ದು ಮೊದಲು ಬೌಲಿಂಗ್ ಮಾಡಲು ನಿರ್ಧರಿಸಿದ್ದಾರೆ. ಆದರೆ, ಟೀಂ ಇಂಡಿಯಾಕ್ಕೆ ಉತ್ತಮ ಆರಂಭ ಸಿಕ್ಕಿಲ್ಲ. ತಂಡ ಎರಡನೇ ಓವರ್ ನ ನಾಲ್ಕನೇ ಎಸೆತದಲ್ಲೇ ವಿರಾಟ್ ಕೊಹ್ಲಿ ವಿಕೆಟ್ ಹೋಯಿತು. ಈ ಪಂದ್ಯದಲ್ಲಿ ಕೊಹ್ಲಿಗೆ ಖಾತೆ ಕೂಡ ತೆರೆಯಲು ಸಾಧ್ಯವಾಗಲಿಲ್ಲ. ಅದರೂ ಎದೆಗುಂದದ ನಾಯಕ ರೋಹಿತ್ ಶರ್ಮಾ (Rohit Sharma), ಸ್ಟಾರ್ಕ್ ಬೌಲ್ ಮಾಡಿದ 3ನೇ ಓವರ್ ನಲ್ಲಿ ಬರೋಬ್ಬರಿ 28 ರನ್ ಕಲೆಹಾಕುವ ಮೂಲಕ ಆಸೀಸ್ ತಂಡಕ್ಕೆ ತಕ್ಕ ಪ್ರತ್ಯುತ್ತರ ನೀಡಿದ್ದಾರೆ.
ಆನಂತರವೂ ಶಾಂತವಾಗದ ರೋಹಿತ್ ಶರ್ಮಾ ನಾಯಕನ ಆಟವಾಡಿ, ಆಸ್ಟ್ರೇಲಿಯಾ ಬೌಲರ್ ಗಳನ್ನು ಚಂಡಾಡಿದ್ದಾರೆ. ಕೇವಲ 19 ಬೌಲ್ ಗಳಲ್ಲಿ ಅರ್ಧಶತಕ ಸಿಡಿಸಿದ್ದ ಅವರು 41 ಬೌಲ್ ಎದುರಿಸಿ 92 ರನ್ ಗಳಿಸಿ ಶತಕ ವಂಚಿತರಾದರು. ಪರಿಣಾಮವಾಗಿ ಭಾರತ ತಂಡ ಆಸ್ಟ್ರೇಲಿಯಾ ವಿರುದ್ಧ ಬೃಹತ್ ರನ್ ಗಳಿಸುವಲ್ಲಿ ಯಶಸ್ವಿಯಾಯಿತು. ಕೇವಲ 19 ಎಸೆತಗಳಲ್ಲಿ ತಮ್ಮ ಅರ್ಧಶತಕ ಸಿಡಿಸಿದ ರೋಹಿತ್ ಇದೀಗ ಅಂತಾರಾಷ್ಟ್ರೀಯ ಟಿ20 ಕ್ರಿಕೆಟ್ನಲ್ಲಿ 200 ಕ್ಕೂ ಅಧಿಕ ಸಿಕ್ಸರ್ ಸಿಡಿಸಿದ ಬ್ಯಾಟರ್ ಎನಿಸಿಕೊಂಡಿದ್ದಾರೆ.