ರಾಯಚೂರು: ರೋಗಿಯೊಬ್ಬರು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದು, ರೊಚ್ಚಿಗೆದ್ದ ಕುಟುಂಬಸ್ಥರು ಸಿಬ್ಬಂದಿ ಮೇಲೆ ಹಲ್ಲೆ ನಡೆಸಿರುವ ಘಟನೆ ನಡೆದಿದೆ.
ನಗರದಲ್ಲಿನ ವಿಜಯ್ ಪಾಲಿ ಕ್ಲಿನಿಕ್ ನಲ್ಲಿ ಈ ಘಟನೆ ನಡೆದಿದೆ. ನಗರದ ಅಂದ್ರೂನ್ ಖಿಲ್ಲಾ ಏರಿಯಾದ ಮೊಹಮದ್ ಹಮೀದ್ ಆಸ್ಪತ್ರೆಗೆ ದಾಖಲಾಗಿದ್ದರು. ಆದರೆ, ವೈದ್ಯರು ಚಿಕಿತ್ಸೆ ಆರಂಭಿಸುತ್ತಿದ್ದಂತೆ ವ್ಯಕ್ತಿಯು ಹೃದಯಾಘಾತಕ್ಕೆ ಬಲಿಯಾಗಿದ್ದಾರೆ. ಆದರೆ, ವೈದ್ಯರಿಂದಲೇ ಆತ ಸಾವನ್ನಪ್ಪಿದ್ದಾನೆ ಎಂದು ಭಾವಿಸಿದ ಕುಟುಂಬಸ್ಥರು ಸಿಬ್ಬಂದಿ ಮೇಲೆ ಮನಬಂದಂತೆ ಥಳಿಸಿದ್ದಾರೆ.
ಆಸ್ಪತ್ರೆಯಲ್ಲಿದ್ದ ವಸ್ತುಗಳನ್ನೆಲ್ಲ ಚೆಲ್ಲಾಪಿಲ್ಲಿ ಮಾಡಿ, ಮುರಿದು ಹಾಕಿದ್ದಾರೆ. ಈ ಕುರಿತು ನಗರದ ಪಶ್ಚಿಮ ಠಾಣೆಯಲ್ಲಿ ದೂರು ದಾಖಲಾಗಿದೆ. ದೂರು ದಾಖಲಿಸಿಕೊಂಡಿರುವ ಪೊಲೀಸರು, ಗಲಾಟೆ ಮಾಡಿದವರಿಗಾಗಿ ಶೋಧ ಕಾರ್ಯ ನಡೆಸುತ್ತಿದ್ದಾರೆ.