ಆನೇಕಲ್: ಕುಡಿದ ಅಮಲಿನಲ್ಲಿ ಗುರಾಯಿಸಿದ್ದಾನೆ ಎಂದು ಕೊಲೆ ಮಾಡಿರುವ ಘಟನೆ ನಡೆದಿದೆ.
ಬೆಂಗಳೂರಿನ ಬನ್ನೇರುಘಟ್ಟ ಪೊಲೀಸ್ ಠಾಣಾ ವ್ಯಾಪ್ತಿಯ ಕಲ್ಕೆರೆಯ ನೈಟ್ ಸಫಾರಿ ಬಾರ್ ನಲ್ಲಿ (bar) ಈ ಘಟನೆ ನಡೆದಿದೆ.
ನವೀನ್ (35) ಸಾವನ್ನಪ್ಪಿದ ವ್ಯಕ್ತಿ. ಬುಧವಾರ ಸಂಜೆ ಬಾರ್ ಗೆ ನವೀನ್ ಮದ್ಯ ಸೇವಿಸಲು ಹೋಗಿದ್ದಾನೆ. ಈ ಸಂದರ್ಭದಲ್ಲಿ ಆತ ಕುಳಿತಿದ್ದ ಟೇಬಲ್ ನ ಪಕ್ಕದಲ್ಲಿಯೇ ಕುಳಿತಿದ್ದಾರೆ. ಮದ್ಯ ಸೇವಿಸುತ್ತಿದ್ದ ಸಂದರ್ಭದಲ್ಲಿ ನವೀನ್ ಗೆ ಯಾಕೋ ಗುರಾಯಿಸುತ್ತಿದ್ದೀಯಾ ಎಂದು ಬಿಯರ್ ಬಾಟಲ್ ನಿಂದ ತಲೆಗೆ ಹೊಡೆದಿದ್ದಾರೆ. ಗಂಭೀರವಾಗಿ ಗಾಯಗೊಂಡಿದ್ದ ನೀವನ್ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾನೆ ಎನ್ನಲಾಗಿದೆ.
ಸದ್ಯ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಬನ್ನೇರುಘಟ್ಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.