ಮಹಿಳೆಯೊಬ್ಬರನ್ನು ಸಾರ್ವಜನಿಕವಾಗಿಯೇ ಥಳಿಸಿರುವ ಘಟನೆಯೊಂದು ವೈರಲ್ ಆಗಿದೆ.
ಮೇಘಾಲಯದಲ್ಲಿ ಈ ಘಟನೆ ನಡೆದಿದೆ. ವಿವಾಹಿತ ಮಹಿಳೆ ಬೇರೊಬ್ಬ ವ್ಯಕ್ತಿಯ ಜತೆಗೆ ಅಕ್ರಮ ಸಂಬಂಧ ಇಟ್ಟುಕೊಂಡಿದ್ದಾರೆ ಎಂಬ ಕಾರಣಕ್ಕೆ ಪುರುಷರ ಗುಂಪೊಂದು ಮನಬಂದಂತೆ ಥಳಿಸಿದೆ. ಸದ್ಯ ಈ ಘಟನೆಯ ವಿಡಿಯೋ ವೈರಲ್ ಆಗಿದೆ. ಪಶ್ಚಿಮ ಗರೋ ಹಿಲ್ಸ್‌ನ ದಾಡೆಂಗ್ಗ್ರೆಯಲ್ಲಿ ಈ ಘಟನೆ ನಡೆದಿದೆ ಎನ್ನಲಾಗಿದೆ.
ವಿಡಿಯೋದಲ್ಲಿ ಅನೇಕ ಪುರುಷರು ಸೇರಿ ಆಕೆಗೆ ಸಾವರ್ಜನಿಕವಾಗಿ ಎಲ್ಲರ ಮುಂದೆ ಥಳಿಸಿದ್ದಾರೆ. ಆದರೆ, ಅಲ್ಲಿದ್ದವರು ಇದನ್ನು ನೋಡಿದ್ದಾರೆಯೇ ಹೊರತು, ಯಾರೊಬ್ಬರೂ ಥಳಿಸುವುದನ್ನು ನಿಲ್ಲಿಸುವಂತೆ ಹೇಳಿಲ್ಲ. ವಿಡಿಯೋ ವೈರಲ್ ಆಗುತ್ತಿದ್ದಂತೆ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಕೈಗೊಂಡಿದ್ದಾರೆ. ಮಹಿಳೆ ಅಕ್ರಮ ಸಂಬಂಧ ಹೊಂದಿದ್ದ ಕಾರಣ ಅವರು ಈ ರೀತಿ ಥಳಿಸಿದ್ದಾರೆ ಎಂದು ಪೊಲೀಸರು ಹೇಳಿದ್ದಾರೆ.
ಈ ಕುರಿತು ಭಾರೀ ಆಕ್ರೋಶ ಕೇಳಿ ಬರುತ್ತಿದೆ. ಮೇಘಾಲಯದ ಹಲವಾರು ನಾಯಕಿಯರು ಈ ಘಟನೆ ಕುರಿತು ಅಸಮಾಧಾನ ವ್ಯಕ್ತಪಡಿಸಿ, ಆರೋಪಿಗಳ ವಿರುದ್ಧ ಕಠಿಣ ಶಿಕ್ಷೆ ವಿಧಿಸುವಂತೆ ಮನವಿ ಮಾಡಿದ್ದಾರೆ.