ಶಿವಮೊಗ್ಗ: ಕರಾವಳಿ ಹಾಗೂ ಮಲೆನಾಡು (Malenadu) ಭಾಗದಲ್ಲಿ ವ್ಯಾಪಕ ಮಳೆಯಾಗುತ್ತಿದ್ದು (Rain) ಆಗುಂಬೆ ಘಾಟಿಯಲ್ಲಿ ಪರ್ಯಾಯ ಮಾರ್ಗ ಕಲ್ಪಿಸಲಾಗಿದೆ.
ವ್ಯಾಪಕ ಮಳೆಯಿಂದಾಗಿ ಆಗುಂಬೆ ಘಾಟಿಯಲ್ಲಿ (Agumbe Ghat) ಭೂ ಕುಸಿತ ಉಂಟಾಗುವ ಸಾಧ್ಯತೆ ಇದೆ. ಹೀಗಾಗಿ ಈ ಮಾರ್ಗದಲ್ಲಿ ಭಾರಿ ವಾಹನ (Heavy Vehicle) ಸಂಚಾರವನ್ನು ನಿಷೇಧಿಸಲಾಗಿದೆ.
ನಿರಂತರ ಮಳೆಯಿಂದಾಗಿ, ಆಗುಂಬೆ ಘಾಟಿಯಲ್ಲಿ ಸೆಪ್ಟೆಂಬರ್ 15ರವರೆಗೆ ಭಾರಿ ವಾಹನ ಸಂಚಾರವನ್ನು ನಿಷೇಧಿಸಲಾಗಿದೆ. ಬೇರೆ ಮಾರ್ಗ ಸೂಚಿಸಿ ಶಿವಮೊಗ್ಗ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಆದೇಶ ಹೊರಡಿಸಿದ್ದಾರೆ.
ಶಿವಮೊಗ್ಗ ಜಿಲ್ಲೆ ಸೇರಿದಂತೆ ಸರಕು ಸಾಗಣೆ ವಾಹನಗಳ ಸಂಚಾರ ನಿಷೇಧಿಸಲಾಗಿದೆ. ಅಲ್ಲದೇ, ತೀರ್ಥಹಳ್ಳಿ-ಉಡುಪಿ ಮಾರ್ಗದಲ್ಲಿ ಸಂಚರಿಸುವ ಭಾರೀ ವಾಹನಗಳಿಗೆ ತೀರ್ಥಹಳ್ಳಿ-ಮಾಸ್ತಿಕಟ್ಟೆ, ಸಿದ್ದಾಪುರ-ಕುಂದಾಪುರ ಉಡುಪಿ ಮಾರ್ಗದಲ್ಲಿ ಸಂಚರಿಸುವಂತೆ ಸೂಚನೆ ನೀಡಲಾಗಿದೆ.