ರಾಯಚೂರು: ಯುವಕನೊಬ್ಬ ಮದುವೆಗೆ ಯುವತಿ ಒಪ್ಪಿಲ್ಲವೆಂದು ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಡೆದಿದೆ.
ರಾಯಚೂರು (Raichur) ಜಿಲ್ಲೆಯ ಲಿಂಗಸುಗೂರು ತಾಲೂಕಿನ ಕನಸಾವಿಯಲ್ಲಿ ಈ ಘಟನೆ ನಡೆದಿದೆ. ಪ್ರೇಮ ವೈಫಲ್ಯ (Love Failure)ವೇ ಯುವಕನ ಸಾವಿಗೆ ಕಾರಣ ಎನ್ನಲಾಗಿದೆ. ಸಂತೋಷ್ (22) ಆತ್ಮಹತ್ಯೆಗೆ ಶರಣಾದ ವ್ಯಕ್ತಿ. ಫ್ಯಾನ್‌ಗೆ ನೇಣು ಬಿಗಿದುಕೊಂಡು ಯುವಕ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಆತ್ಮಹತ್ಯೆಗೂ ಮೊದಲು ನಾನು ಒಬ್ಬ ಹುಚ್ಚು ಪ್ರೇಮಿ ಎಂದು ವಾಟ್ಸಪ್‌ನಲ್ಲಿ ಸ್ಟೇಟಸ್ ಹಾಕಿ ನಂತರ ಆತ್ಮಹತ್ಯೆಗೆ ಶರಣಾಗಿದ್ದಾನೆ.
ಆತ್ಮಹತ್ಯೆ ಮಾಡಿಕೊಂಡಿರುವ ಸಂತೋಷ್ ತನ್ನ ಅತ್ತಿಗೆಯ ತಂಗಿಯನ್ನು ಪ್ರೀತಿಸುತ್ತಿದ್ದ. ಆದರೆ, ಮದುವೆಗೆ ಆ ಯುವತಿ ಒಪ್ಪದಿದ್ದಾಗ ಆತ್ಮಹತ್ಯೆಗೆ ಶರಣಾಗಿದ್ದಾನೆ ಎನ್ನಲಾಗಿದೆ. ಈ ಕುರಿತು ಮುದಗಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.