ಬೆಂಗಳೂರು: ರಾಜ್ಯಕ್ಕೆ ಕೇಂದ್ರ ಸರ್ಕಾರದಿಂದ ಸಿಗಬೇಕಾದ ನೆರವು ಸಿಗುವ ಭರವಸೆ ಇದೆ. ಈ ಕುರಿತು ಕೇಂದ್ರ ಸಚಿವರು ಹಾಗೂ ಸಂಸದರು ಸಹಕಾರ ನೀಡುವ ಭರವಸೆ ನೀಡಿದ್ದಾರೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ (D.K Shivakumar) ಹೇಳಿದ್ದಾರೆ.
ಬೆಂಗಳೂರಿನಲ್ಲಿ (Bengaluru) ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನೆರವಿನ ವಿಚಾರದಲ್ಲಿ ಎಲ್ಲಾ ರೀತಿಯ ಸಹಕಾರ ನೀಡುವುದಾಗಿ ಕೇಂದ್ರ ಸಚಿವರುಗಳು ಹಾಗೂ ಸಂಸದರು ಹೇಳಿದ್ದಾರೆ. ಸಂಸದರು ಹಾಗೂ ಕೇಂದ್ರ ಸಚಿವರನ್ನು ಭೇಟಿ ಮಾಡಿ ರಾಜ್ಯದ ಅಭಿವೃದ್ಧಿ ಹಾಗೂ ಅನುದಾನ ಹಂಚಿಕೆಯ ವಿಷಯವಾಗಿ ಮಾತನಾಡಿದ್ದೇವೆ. ನಾವೆಲ್ಲರೂ ಸಹಕಾರ ನೀಡುತ್ತೇವೆ ಎಂದು ಅವರು ಭರವಸೆ ನೀಡಿದ್ದಾರೆ ಎಂದು ತಿಳಿಸಿದ್ದಾರೆ.
ಮುಖ್ಯವಾಗಿ ಸಚಿವೆ ನಿರ್ಮಲಾ ಸೀತಾರಾಮನ್ (Nirmala Sitharaman) ಎರಡು ಗಂಟೆ ನಮ್ಮೊಂದಿಗೆ ಮಾತನಾಡಿದ್ದಾರೆ. ಅವರಿಗೆ ಭದ್ರಾ ಮೇಲ್ದಂಡೆ ವಿಚಾರದಲ್ಲಿ ಇನ್ನೂ ಸ್ಪಷ್ಟ ಮಾಹಿತಿ ಬಂದಿಲ್ಲ. ಎಲ್ಲರೂ ಮಹದಾಯಿ ಹಾಗೂ ಬೇರೆ ವಿಚಾರದಲ್ಲಿ ಸಹಕರಿಸುತ್ತೇವೆ ಎಂದು ಹೇಳಿದ್ದಾರೆ. ಎಲ್ಲ ಸಮಸ್ಯೆಗಳನ್ನು ಬಗೆಹರಿಸಲಾಗುವುದು ಎಂದು ಹೇಳಿದ್ದಾರೆ.
