ರಾಜ್ಯದಲ್ಲಿ ಮುಂದಿನ 5 ದಿನ ಭಾರೀ ಮಳೆಯಾಗುವ (Rain) ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ.
ಈಗಾಗಲೇ ಕಳೆದ ಒಂದು ವಾರದಿಂದ ಕರಾವಳಿಯಲ್ಲಿ ಭಾರೀ ಮಳೆಯಾಗಿಗುತ್ತಿದ್ದು, ಇಂದಿನಿಂದ 5 ದಿನ ಅಂದರೆ ಜುಲೈ 4 ರವರೆಗೆ ಮತ್ತಷ್ಟು ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ತಿಳಿಸಿದೆ. ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಶಿವಮೊಗ್ಗ ಹಾಗೂ ಕೊಡಗು ಜಿಲ್ಲೆಗಳಿಗೆ ಯಲ್ಲೋ ಅಲರ್ಟ್ ಘೋಷಿಸಲಾಗಿದೆ. ಗಾಳಿಯ ವೇಗ ಕೂಡ ಹೆಚ್ಚಾಗುವ ಸಾಧ್ಯತೆ ಹಿನ್ನೆಲೆ ಮೀನುಗಾರರು ಸಮುದ್ರಕ್ಕಿಳಿಯದಂತೆ ಸೂಚನೆ ನೀಡಲಾಗಿದೆ.
ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಶಿವಮೊಗ್ಗ ಚಿಕ್ಕಮಗಳೂರು ಹಾಗೂ ಕೊಡಗಿನಲ್ಲಿ ಜುಲೈ 1 ರವರೆಗೆ ಯೆಲ್ಲೋ ಅಲರ್ಟ್ ನೀಡಲಾಗಿದೆ.
ಜು 1ರಂದು ಕರಾವಳಿ ಕರ್ನಾಟಕದ ಜಿಲ್ಲೆಗಳಲ್ಲಿ ಭಾರೀ ಮಳೆ, ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ.
ದಕ್ಷಿಣ ಒಳನಾಡಿನ ಚಿಕ್ಕಮಗಳೂರು, ಕೊಡಗು, ಶಿವಮೊಗ್ಗ ಜಿಲ್ಲೆಗಳಲ್ಲಿ ಗಾಳಿಯ ವೇಗವು (30-40 kmph) ತಲುಪುವ ಸಾಧ್ಯತೆಯಿದೆ. ಒಂದೆರಡು ಕಡೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಅಂದು ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ ಮತ್ತು ಹಾವೇರಿ ಜಿಲ್ಲೆಗಳ ಒಂದೆರಡು ಸ್ಥಳಗಳಲ್ಲಿ ಗಾಳಿಯ ವೇಗವು (30-40 kmph) ತಲುಪುವ ಸಾಧ್ಯತೆಯಿದೆ. ಅಲ್ಲದೇ, ಹಗುರವಾಗಿ ಮಳೆಯಾಗುವ ಸಾಧ್ಯತೆ ದೆ. ದಕ್ಷಿಣ ಒಳನಾಡಿನ ಉಳಿದ ಜಿಲ್ಲೆಗಳ ಕೆಲವು ಸ್ಥಳಗಳಲ್ಲಿ ಗಾಳಿಯ ವೇಗವು (30-40 kmph) ತಲುಪುವ ಸಾಧ್ಯತೆಯಿದೆ ಹಾಗೂ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.
ಜುಲೈ 2ರಂದು ಕರಾವಳಿ ಭಾಗದ ಬಹುತೇಕ ಜಿಲ್ಲೆಗಳಲ್ಲಿ, ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ ಮತ್ತು ಹಾವೇರಿ ಹಾಗೂ ದಕ್ಷಿಣ ಒಳನಾಡಿನ ಚಿಕ್ಕಮಗಳೂರು, ಕೊಡಗು, ಶಿವಮೊಗ್ಗ, ಹಾಸನ ಜಿಲ್ಲೆಗಳ ಒಂದೆರಡು ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಜುಲೈ 3ರಂದು ಕರಾವಳಿ ಕರ್ನಾಟಕದ ಎಲ್ಲ ಜಿಲ್ಲೆಗಳ ಬಹುತೇಕ ಸ್ಥಳಗಳಲ್ಲಿ ಹಾಗೂ ಒಳನಾಡಿನ ಎಲ್ಲ ಜಿಲ್ಲೆಗಳ ಕೆಲವು ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯನ್ನು ಹವಾಮಾನ ಇಲಾಖೆ ನೀಡಿದೆ. ಜುಲೈ 4ರಂದು ಕರಾವಳಿ ಕರ್ನಾಟಕದ ಎಲ್ಲ ಜಿಲ್ಲೆಗಳ ಬಹುತೇಕ ಸ್ಥಳಗಳಲ್ಲಿ ಹಾಗೂ ಒಳನಾಡಿನ ಎಲ್ಲ ಜಿಲ್ಲೆಗಳ ಕೆಲವು ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ತಿಳಿಸಿದೆ. ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣವಿದ್ದು, ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.