ಸೇನಾ ಶಿಬಿರದ ಮೇಲೆ ಭಯೋತ್ಪಾದಕರು ದಾಳಿ ನಡೆಸಿದ್ದು, ಓರ್ವ ಯೋಧ ಗಾಯಗೊಂಡಿರುವ ಘಟನೆ ನಡೆದಿದೆ.
ಜಮ್ಮು ಮತ್ತು ಕಾಶ್ಮೀರದ ರಾಜೌರಿ ಜಿಲ್ಲೆಯ ಮಂಜಕೋಟೆ ಪ್ರದೇಶದ ಗಲೂತಿ ಗ್ರಾಮದ ಟೆರಿಟೋರಿಯಲ್ ಆರ್ಮಿಯ ಸೆಂಟ್ರಿ ಪೋಸ್ಟ್ ಮೇಲೆ ಬೆಳಗ್ಗೆ ಈ ಘಟನೆ ನಡೆದಿದೆ. ದಾಳಿಯಲ್ಲಿ ಓರ್ವ ಯೋಧ ಗಾಯಗೊಂಡಿದ್ದು, ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಲಿದು ಬಂದಿದೆ.
ಸೇನಾ ಶಿಬಿರದ ಮೇಲೆ ಭಯೋತ್ಪಾದಕರು ದಾಳಿ ನಡೆಸುತ್ತಿದ್ದಂತೆ ಸೈನಿಕರು ಪ್ರತಿ ದಾಳಿ ನಡೆಸಿದ್ದಾರೆ. ಹೀಗಾಗಿ ಭಯೋತ್ಪಾದಕರ ದಾಳಿಯನ್ನು ವಿಫಲಗೊಳಿಸಿದ್ದಾರೆ. ಉಗ್ರರು ಪಲಾಯನಗೈದಿದ್ದಾರೆ ಎಂದು ಪ್ರಾಥಮಿಕ ವರದಿಗಳು ಸೂಚಿಸಿವೆ. ಈ ವೇಳೆ 30 ನಿಮಿಷಗಳ ಕಾಲ ಗುಂಡಿನ ಚಕಮಕಿ ಮುಂದುವರೆದಿದೆ. ಆದರೆ ಭಯೋತ್ಪಾದಕರು ಹತ್ತಿರದ ಅರಣ್ಯಕ್ಕೆ ಹೋಗಿ ತಪ್ಪಿಸಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ.
ದಾಳಿಕೋರರನ್ನು ಪತ್ತೆಹಚ್ಚಲು ಸೇನೆ ಮತ್ತು ಪೊಲೀಸರು ಕಾರ್ಯಾಚರಣೆ ಆರಂಭಿಸಿದ್ದಾರೆ. ಶನಿವಾರ, ಕುಲ್ಗಾಮ್ ಜಿಲ್ಲೆಯಲ್ಲಿ ನಡೆದ ಪ್ರತ್ಯೇಕ ಎನ್‌ಕೌಂಟರ್‌ಗಳಲ್ಲಿ ಕನಿಷ್ಠ ನಾಲ್ವರು ಭಯೋತ್ಪಾದಕರು ಹತರಾಗಿದ್ದಾರೆ ಮತ್ತು ಇಬ್ಬರು ಸೈನಿಕರು ಹುತಾತ್ಮರಾಗಿದ್ದಾರೆ. ಇದರ ಬೆನ್ನಲ್ಲಿಯೇ ಮತ್ತೊಮ್ಮೆ ದಾಳಿ ನಡೆಸಿದ್ದಾರೆ.
