ಗದಗ: ಕರ್ನಾಟಕ ರಾಜ್ಯವನ್ನು ಈಗ ಡೆಂಗ್ಯೂ ಎಂಬ ಹೆಮ್ಮಾರಿ ಕಾಡುತ್ತಿದೆ. ಡೆಂಗ್ಯೂಗೆ (Dengue) ಈಗ ಗದಗ (Gadag) ಜಿಲ್ಲೆಯಲ್ಲಿ ಮೊದಲ ಬಲಿಯಾಗಿದ್ದು, 5 ವರ್ಷದ ಬಾಲಕ ಸಾವನ್ನಪ್ಪಿದ್ದಾನೆ.
ಗದಗ ಜಿಲ್ಲೆಯ ಶಿರುಂಜ ಗ್ರಾಮದ ಚಿರಾಯಿ ಹೊಸಮನಿ (5) ಸಾವನ್ನಪ್ಪಿದ ಬಾಲಕ. ಬಾಲಕನಲ್ಲಿ ಜ್ವರ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಆತನನ್ನು ಜಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಆತ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾನೆ. ಕಳೆದ ಒಂದು ವಾರದಿಂದ ತೀವ್ರ ಜ್ವರದಿಂದ ಬಳಲುತ್ತಿದ್ದ ಈತನನ್ನು ಹೆಚ್ಚಿನ ಚಿಕಿತ್ಸೆಗಾಗಿ ಧಾರವಾಡ ಎಸ್‌ಡಿಎಮ್ ಆಸ್ಪತ್ರೆಗೆ ದಾಖಲಿಸಲಾಗಿತ್ತು.