ನವದೆಹಲಿ: ಹೊಸ ಕಾನೂನಿನಡಿ ಟಿಎಂಸಿ ಸಂಸದೆ ವಿರುದ್ಧ ಪ್ರಕರಣ ದಾಖಲಾಗಿದೆ.
ರಾಷ್ಟ್ರೀಯ ಮಹಿಳಾ ಆಯೋಗದ (NCW) ಮುಖ್ಯಸ್ಥೆ ರೇಖಾ ಶರ್ಮಾ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ್ದಕ್ಕೆ ಟಿಎಂಸಿ (TMC) ಸಂಸದೆ ಮಹುವಾ ಮೊಯಿತ್ರಾ (Mahua Moitra) ವಿರುದ್ಧ ಹೊಸ ಕಾನೂನಿನಡಿ ಪ್ರಕರಣ ದಾಖಲಾಗಿದೆ. ಶರ್ಮಾ ಅವರ ದೂರಿನ ಆಧಾರದ ಮೇಲೆ ಹೊಸ ಕ್ರಿಮಿನಲ್ ಕಾನೂನಿನ ಭಾರತೀಯ ನ್ಯಾಯ ಸಂಹಿತೆಯ ಸೆಕ್ಷನ್ 79ರ ಅಡಿಯಲ್ಲಿ ಪ್ರಕರಣ ದಾಖಲಾಗಿದೆ.
ಲೋಕಸಭೆಯಲ್ಲಿ ಪ್ರಶ್ನೆ ಕೇಳುವುದಕ್ಕೆ ಲಂಚ ಪಡೆದ ಆರೋಪದಲ್ಲಿ ಪಶ್ಚಿಮ ಬಂಗಾಳದ ಕೃಷ್ಣನಗರದ ಸಂಸದೆ ಮೊಯಿತ್ರಾ ಅವರನ್ನು ಅನರ್ಹಗೊಳಿಸಲಾಗಿತ್ತು. ಆದರೆ, ಇತ್ತೀಚೆಗೆ ನಡೆದ ಚುನಾವಣೆಯಲ್ಲಿ ಸುಮಾರು 56,000 ಮತಗಳ ಅಂತರದಿಂದ ಅವರು ಜಯಗಳಿಸಿದ್ದಾರೆ. ಆದರೆ, ಇತ್ತೀಚೆಗೆ ಮಹಿಳಾ ಆಯೋಗದ ವೀಡಿಯೊಗಳಿಗೆ ಪ್ರತಿಕ್ರಿಯೆಯಾಗಿ ಹೇಳಿಕೆ ನೀಡಿದ್ದರು. ರಾಷ್ಟ್ರೀಯ ಮಹಿಳಾ ಆಯೋಗ (ಎನ್‌ಸಿಡಬ್ಲ್ಯು) ಶುಕ್ರವಾರದ ಹೇಳಿಕೆಯನ್ನು ಗಮನದಲ್ಲಿಟ್ಟುಕೊಂಡು ಮೊಯಿತ್ರಾ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಹೀಗಾಗಿ ವಿವಾದಿತ ನಾಯಕಿ ಮಹುವಾ ಮೊಯಿತ್ರಾ ಮತ್ತೊಂದು ಕಾನೂನು ಸಂಘರ್ಷ ಎದುರಿಸಬೇಕಿದೆ.
