ಚಂಡೀಗಢ: ಶಾಲಾ ಮಕ್ಕಳಿದ್ದ ಬಸ್ ಅಪಘಾತವಾದ ಪರಿಣಾಮ 40ಕ್ಕೂ ಅಧಿಕ ವಿದ್ಯಾರ್ಥಿಗಳು ಗಾಯಗೊಂಡಿರುವ ಘಟನೆ ನಡೆದಿದೆ.
ಹರಿಯಾಣದ ಪಂಚಕುಲದಲ್ಲಿ (Panchakula Haryana) ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಸುಮಾರು 40ಕ್ಕೂ ಹೆಚ್ಚು ಶಾಲಾ ಮಕ್ಕಳು ಗಾಯಗೊಂಡಿದ್ದಾರೆ.
ಪಂಚಕುಲದ ಪಿಂಜೋರ್ ಹತ್ತಿರದ ಗುಡ್ಡಗಾಡು ಪ್ರದೇಶದಲ್ಲಿ ಹರಿಯಾಣ ರೋಡ್‌ವೇಸ್ ಬಸ್ ಪಲ್ಟಿಯಾಗಿದೆ. ಅಪಘಾತದಲ್ಲಿ 40ಕ್ಕೂ ಅಧಿಕ ಶಾಲಾ ಮಕ್ಕಳು ಗಾಯಗೊಂಡಿದ್ದಾರೆ. ಘಟನೆಯಲ್ಲಿ ಗಾಯಗೊಂಡ ವಿದ್ಯಾರ್ಥಿಗಳನ್ನು ಕೂಡಲೇ ಪಿಂಜೋರ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಆದರೆ, ಅದೃಷ್ಟವಶಾತ್ ಯಾವುದೇ ಸಾವು- ನೋವು ಸಂಭವಿಸಿಲ್ಲ.
ಅಪಘಾತಕ್ಕೆ ಬಸ್ ಚಾಲಕನ ಅತಿ ವೇಗವೇ ಕಾರಣ ಎನ್ನಲಾಗಿದೆ. ಬಸ್ ನಲ್ಲಿ ಹೆಚ್ಚಿನ ಸಂಖ್ಯೆಯ ಪ್ರಯಾಣಿಕರು ಅಂದರೆ ಓವರ್ ಲೋಡ್ ಮತ್ತು ರಸ್ತೆಯ ಕಳಪೆ ಸ್ಥಿತಿ ಕೂಡ ಕಾರಣ ಎನ್ನಲಾಗುತ್ತಿದೆ. ಆದರೆ ಘಟನೆಗೆ ಸ್ಪಷ್ಟ ಕಾರಣ ಇನ್ನೂ ತಿಳಿದು ಬಂದಿಲ್ಲ.