ಬೆಂಗಳೂರು: ರಾಜ್ಯದಲ್ಲಿ ಡೆಂಗ್ಯೂ ಪ್ರಕರಣದ ಆತಂಕ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿವೆ.
ಡೆಡ್ಲಿ ಡೆಂಗ್ಯೂ ಪ್ರಕರಣಗಳು (Dengue Cases) ರಾಜ್ಯದಲ್ಲಿ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿವೆ. ಸೋಮವಾರ (ಜು.8) 197 ಪ್ರಕರಣಗಳು ಪತ್ತೆಯಾಗಿವೆ. ಈ ಹಿನ್ನೆಲೆಯಲ್ಲಿ ಒಟ್ಟು ಪ್ರಕರಣಗಳ ಸಂಖ್ಯೆ 7,362ಕ್ಕೆ ಏರಿಕೆ ಕಂಡಿವೆ.
7,362 ಪ್ರಕರಣಗಳಲ್ಲಿ 303 ಸಕ್ರೀಯ ಪ್ರಕರಣಗಳಿವೆ. ಡೆಂಗ್ಯೂ ಜ್ವರಕ್ಕೆ ಸೋಮವಾರವೂ ಓರ್ವ ವ್ಯಕ್ತಿ ಬಲಿಯಾಗಿದ್ದಾನೆ. ಈ ಮೂಲಕ ಡೆಂಗ್ಯೂಗೆ ಬಲಿಯಾದವರ ಸಂಖ್ಯೆ 7ಕ್ಕೆ ಏರಿಕೆಯಾಗಿದೆ. ಈ ಪೈಕಿ ಹಾಸನದಲ್ಲಿ 2, ಮೈಸೂರು, ಹಾವೇರಿ, ಧಾರವಾಡ, ಶಿವಮೊಗ್ಗ ಹಾಗೂ ಬೆಂಗಳೂರಲ್ಲಿ ತಲಾ ಒಂದೊಂದು ಮರಣ ಕೇಸ್ ಪತ್ತೆಯಾಗಿದೆ ಎಂದು ಆರೋಗ್ಯ ಇಲಾಖೆ (Health Department) ಮಾಹಿತಿ ತಿಳಿಸಿದೆ.
