ಉಡುಪಿ: ತಂದೆ ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿದ್ದಕ್ಕೆ ಮಗಳು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.
ಮಣಿಪಾಲ(Manipal)ದ ಹೆರ್ಗದಲ್ಲಿ ಈ ಘಟನೆ ನಡೆದಿದೆ. ಚಿಕ್ಕಮಗಳೂರು ಕೊಪ್ಪ ತಾಲೂಕಿನ ಹರಂದೂರು ಗ್ರಾಮದ ಶ್ರೀನಿಧಿ ಶೆಟ್ಟಿ (20) ಆತ್ಮಹತ್ಯೆ ಮಾಡಿಕೊಂಡಿರುವ ವಿದ್ಯಾರ್ಥಿನಿ. ಈ ಯುವತಿ ಮಂಗಳೂರಿನ ಆಳ್ವಾಸ್ ಕಾಲೇಜಿನಲ್ಲಿ ಸಿಎ ವ್ಯಾಸಂಗ ಮಾಡುತ್ತಿದ್ದರು. ಇತ್ತೀಚೆಗೆ ಡಯಾಲಿಸಿಸ್ ಹಿನ್ನಲೆಯಲ್ಲಿ ವಿದ್ಯಾರ್ಥಿನಿಯ ತಂದೆ ಕೊಪ್ಪ ಹರಂದೂರು ಗ್ರಾಮದ ಮಹೇಶ್ ಎನ್ನುವವರು ಮಣಿಪಾಲ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಇದರಿಂದಾಗಿ ವಿದ್ಯಾರ್ಥಿನಿ ಮನನೊಂದಿದ್ದಳು ಎನ್ನಲಾಗಿದೆ.
ಹೆರ್ಗ ಗ್ರಾಮದಲ್ಲಿ ಬಾಡಿಗೆ ಮನೆ ಮಾಡಿಕೊಂಡು ಪತ್ನಿ ಹಾಗೂ ಮಗಳೊಂದಿಗೆ ಮಹೇಶ್ ವಾಸವಾಗಿದ್ದರು. ಬಾಡಿಗೆ ಮನೆಯ ರೂಮ್ ನಲ್ಲಿ ಯಾರು ಇಲ್ಲದ ವೇಳೆ ಶ್ರೀನಿಧಿ ನೇಣು ಬಿಗಿದು ಆತ್ಮಹತ್ಯೆಗೆ ಶರಣಾಗಿದ್ದಾಳೆ. ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿದ್ದಕ್ಕೆ ನಿಖರ ಕಾರಣ ತಿಳಿದು ಬಂದಿಲ್ಲ. ಈ ಕುರಿತು ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಮಾಡುತ್ತಿದ್ದಾರೆ.