ರಾಜ್ಯದ ಕರಾವಳಿಯಲ್ಲಿ ಕಳೆದ ಕೆಲವು ದಿನಗಳಿಂದ ಭಾರೀ ಮಳೆಯಾಗುತ್ತಿದ್ದು, ಇಂದು ಕೂಡ ಭಾರೀ ಮಳೆಯಾಗುವ ಮುನ್ಸೂಚನೆ ಇದೆ.
ಹೀಗಾಗಿ ಕರಾವಳಿ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಉತ್ತರ ಒಳನಾಡಿನ ಬೆಳಗಾವಿ, ಬೀದರ್, ಗದಗ, ಕಲಬುರಗಿ, ಯಾದಗಿರಿ, ದಕ್ಷಿಣ ಒಳನಾಡಿನ ಚಿಕ್ಕಮಗಳೂರು, ಹಾಸನದಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ.
ಧಾರವಾಡ, ಹಾವೇರಿ, ಕೊಪ್ಪಳ, ರಾಯಚೂರು, ವಿಜಯಪುರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿತ್ರದುರ್ಗ, ದಾವಣಗೆರೆ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರಿನಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ತಿಳಿಸಿದೆ.
ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣವಿದ್ದು ಇಂದು ಹಗುರವಾದ ಮಲೆಯಾಗುವ ಸಾಧ್ಯತೆಯನ್ನು ಹವಾಮಾನ ಇಲಾಖೆ ನೀಡಿದೆ.


















