ಬೆಂಗಳೂರು: ಆದಾಯಕ್ಕಿಂತ ಹೆಚ್ಚು ಆಸ್ತಿ ಹೊಂದಿರುವ ಆರೋಪದ ಹಿನ್ನೆಲೆಯಲ್ಲಿ ಹಲವು ಇಂಜಿನಿಯರ್ ಗಳಿಗೆ ಲೋಕಾಯುಕ್ತ ಅಧಿಕಾರಿಗಳು ಶಾಕ್ ನೀಡಿದ್ದಾರೆ.
ರಾಜ್ಯ ಸರ್ಕಾರದ ವಿವಿಧ ಇಲಾಖೆಗಳ ಇಬ್ಬರು ನಿವೃತ್ತ ಇಂಜಿನಿಯರ್ ಸೇರಿದಂತೆ 11 ಅಧಿಕಾರಿಗಳಿಗೆ ಸಂಬಂಧಿಸಿದ 56 ಸ್ಥಳಗಳ ಮೇಲೆ ಲೋಕಾಯುಕ್ತ ಪೊಲೀಸರು (Lokayukta Police) ದಾಳಿ ನಡೆಸಿದ್ದಾರೆ.
ಬೆಂಗಳೂರು, ಮಂಡ್ಯ, ಕಲಬುರಗಿ, ಚಿತ್ರದುರ್ಗ, ದಾವಣಗೆರೆ , ಬೆಳಗಾವಿ,ಕೋಲಾರ, ಮೈಸೂರು ,ಬೆಂಗಳೂರು, ಹಾಸನ ಜಿಲ್ಲೆಗಳಲ್ಲಿನ ಇಂಜಿನಿಯರ್ ಗಳ ನಿವಾಸ ಹಾಗೂ ಸ್ಥಳಗಳ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ, ದಾಖಲೆ ಪರಿಶೀಲನೆ ನಡೆಸುತ್ತಿದ್ದಾರೆ.

11 ಪ್ರಕರಣಗಳಿಗೆ ಸಂಬಂಧಿಸಿದಂತೆ 9 ಜಿಲ್ಲೆಗಳಲ್ಲಿ ದಾಳಿ ನಡೆದಿದೆ. ಒಟ್ಟು 56 ಸ್ಥಳಗಳಲ್ಲಿ 100 ಕ್ಕೂ ಅಧಿಕಾರಿಗಳ ತಂಡದ ದಾಳಿ ನಡೆಸಿ ಕಡತ ಪರಿಶೀಲಿಸುತ್ತಿದೆ. ಬೆಂಗಳೂರಿನಲ್ಲಿ 15 ಕ್ಕೂ ಅಧಿಕ ಕಡೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಪಾಲಿಕೆ ಇಂಜನಿಯರ್ ಬಸವರಾಜ್ ಮಾಗಿ ಮನೆ ಹಾಗೂ ಸಂಬಂಧಿಕರ ಮನೆಯಲ್ಲಿ ಶೋಧ ನಡೆಸುತ್ತಿದ್ದಾರೆ.
ಈ ಎಲ್ಲ ಅಧಿಕಾರಿಗಳ ವಿರುದ್ಧ ಆದಾಯಕ್ಕಿಂತ ಹೆಚ್ಚು ಆಸ್ತಿ (Disappropriate Assets) ಹೊಂದಿರುವ ಆರೋಪವಿದೆ. ನ್ಯಾಯಾಲಯದಿಂದ ಶೋಧನಾ ವಾರಂಟ್ ಪಡೆದು ಇಂದು ಬೆಳಗ್ಗೆ ದಾಳಿ ನಡೆಸಲಾಗಿದೆ.
