ಬೆಂಗಳೂರು: ಅತ್ಯಾಚಾರ ನಡೆಸುವುದಾಗಿ ಬೆದರಿಕೆ ಹಾಕಿದ ಆರೋಪದ ಹಿನ್ನಲೆ ಆರ್ ಟಿಐ (RTI) ಕಾರ್ಯಕರ್ತನೊಬ್ಬನನ್ನು ಪೊಲೀಸರು ಬಂಧಿಸಿದ್ದಾರೆ.
ಶ್ರೀನಿವಾಸ್ ಬಂಧಿತ ಆರೋಪಿ. ಬೆಂಗಳೂರಿನ ಕಾಡುಗೋಡಿ ಪೊಲೀಸರು(Kadugodi Police Station) ಬಂಧಿಸಿದ್ದಾರೆ. ಸ್ನೇಹಿತನ ಜೊತೆಗೂಡಿ ಪರಿಚಯವಿದ್ದ ಮಹಿಳೆಯ ಖಾಸಗಿ ಫೋಟೋ ಇಟ್ಟುಕೊಂಡು ಅದನ್ನು ಸಾಮಾಜಿಕ ಜಾಲತಾಣದಲ್ಲಿ ಹಾಕುವುದಾಗಿ ಶ್ರೀನಿವಾಸ್ ಬೆದರಿಕೆ ಹಾಕಿದ್ದ ಎಂಬ ಆರೋಪ ಕೇಳಿ ಬಂದಿದೆ. ಈ ಕುರಿತು ಸಂತ್ರಸ್ತ ಮಹಿಳೆ ಕಾಡುಗೋಡಿ ಪೊಲೀಸ್ ಠಾಣೆಗೆ ದೂರು ನೀಡಿದ್ದರು.
ಕಾಡುಗೋಡಿ ಮೆಟ್ರೋ ಸ್ಟೇಷನ್ ಹತ್ತಿರ ಶ್ರೀನಿವಾಸ್ ಬೆದರಿಕೆ ಹಾಕಿದ್ದ ಎನ್ನಲಾಗಿದೆ. ಈ ಕುರಿತು ಕಾಡುಗೋಡಿ ಪೊಲೀಸ್ ಠಾಣೆಗೆ ಮಹಿಳೆ ನೀಡಿದ ದೂರಿನ ಮೇರೆಗೆ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಈತ ಕೆಆರ್ಎಸ್ ಪಕ್ಷದಲ್ಲಿ ಗುರುತಿಸಿಕೊಂಡಿದ್ದ ಎನ್ನಲಾಗಿದೆ.