ಅವಳಿ ಮಕ್ಕಳ ತಂದೆ ನಾನಲ್ಲ ಎಂದು ಪತಿ ಹೇಳಿದ್ದಕ್ಕೆ ಪತ್ನಿಯೊಬ್ಬಳು ತನ್ನ ನವಜಾತ ಶಿಶುಗಳ ಕತ್ತು ಸೀಳಿ ಹತ್ಯೆ ಮಾಡಿರುವ ಘಟನೆ ನಡೆದಿದೆ.
ಈ ಘಟನೆ ಜಮ್ಮು ಕಾಶ್ಮೀರದ ಪೂಂಚ್ ನಲ್ಲಿ ನಡೆದಿದೆ. ತಾಯಿಯೊಬ್ಬಳು ತನ್ನ ಮಕ್ಕಳನ್ನು ಬರ್ಬರವಾಗಿ ಕೊಲೆ ಮಾಡಿದ್ದಾಳೆ. ತನ್ನ ಪತಿ ತನ್ನನ್ನು ಮಕ್ಕಳ ತಂದೆ ಎಂದು ಒಪ್ಪಿಕೊಳ್ಳಲು ನಿರಾಕರಿಸಿದ ಹಿನ್ನೆಲೆಯಲ್ಲಿ ಮಹಿಳೆಯು ತನ್ನ ನವಜಾತ ಅವಳಿ ಮಕ್ಕಳ ಕತ್ತು ಸೀಳಿ ಕೊಲೆ ಮಾಡಿದ್ದಾಳೆ ಎನ್ನಲಾಗುತ್ತಿದೆ.
ಸದ್ಯದ ಮಾಹಿತಿಯಂತೆ, ಮೂರು ತಿಂಗಳ ಹಿಂದೆ ಸೌದಿ ಅರೇಬಿಯಾದಲ್ಲಿ ಕೆಲಸ ಮಾಡುತ್ತಿದ್ದ ವ್ಯಕ್ತಿ ಬಹಳ ಸಮಯದ ನಂತರ ಮನೆಗೆ ಬಂದಿದ್ದ. ಸ್ವಲ್ಪವೇ ಸಮಯದ ನಂತರ ಅವಳಿ ಮಕ್ಕಳಿಗೆ ಜನ್ಮ ನೀಡಿದಾಗ ಆತ ಪೊಲೀಸರ ಬಳಿ ಹೋಗಿ ಅಕ್ರಮ ಸಂಬಂಧದಿಂದ ಪತ್ನಿ ಮಕ್ಕಳನ್ನು ಪಡೆದಿದ್ದಾಳೆ. ಇವು ನನ್ನ ಮಕ್ಕಳಲ್ಲ ಎಂದು ಹೇಳಿದ್ದಾನೆ. ಈ ಮಾಹಿತಿ ಗೊತ್ತಾಗುತ್ತಿದ್ದಂತೆ ಮಹಿಳೆಯು ನವಜಾತ ಶಿಶುಗಳನ್ನು ಹೊಲಕ್ಕೆ ತೆಗೆದುಕೊಂಡು ಹೋಗಿ ಹತ್ಯೆ ಮಾಡಿದ್ದಾಳೆ.
ಆರಂಭದಲ್ಲಿ ವ್ಯಕ್ತಿಯೇ ಕೊಲೆ ಮಾಡಿರಬಹುದು ಎಂದು ಪೊಲೀಸರು ಶಂಕಿಸಿದ್ದರು. ಆದರೆ, ಪತ್ನಿ ವಿಚಾರಣೆ ವೇಳೆ ಈ ಸತ್ಯ ಬಾಯಿಬಿಟ್ಟಿದ್ದಾಳೆ ಎನ್ನಲಾಗಿದೆ. ಮಹಿಳೆಯ ಕೃತ್ಯಕ್ಕೆ ಎಲ್ಲೆಡೆ ಆಕ್ರೋಶ ವ್ಯಕ್ತವಾಗುತ್ತಿದ್ದು, ಕಠಿಣ ಶಿಕ್ಷೆ ನೀಡಬೇಕೆಂದು ಸ್ಥಳೀಯರು ಆಗ್ರಹಿಸಿದ್ದಾರೆ.