ಇತ್ತೀಚೆಗೆ ಕಾಮುಕರ ಕೃತ್ಯಗಳು ಮಿತಿ ಮೀರುತ್ತಿವೆ. ಐಸ್ ಕ್ರೀಮ್ ಮಾರಾಟ ಮಾಡುತ್ತಿದ್ದ ಪಾಪಿಯೊಬ್ಬಾತ ಐಸ್ ಕ್ರೀಮ್ ಕೊಳ್ಳಲು ಬಂದ ಬಾಲಕಿಯ ಮೈ ಮೇಲೆ ಕೈ ಹಾಕಿ ಅಸಭ್ಯವಾಗಿ ವರ್ತಿಸಿದ್ದಲ್ಲದೇ, ಕಿಸ್ ಮಾಡಿರುವ ಘಟನೆಯೊಂದು ನಡೆದಿದೆ ಎನ್ನಲಾಗಿದೆ.
ಈ ಅಘಾತಕಾರಿ ಘಟನೆ ಮಧ್ಯಪ್ರದೇಶದ ಭೋಪಾಲ್‌ನಲ್ಲಿ ನಡೆದಿದ್ದು, ಐಸ್ ಕ್ರೀಮ್ ಮಾರಾಟಗಾರನೊಬ್ಬ ಬಾಲಕಿಯೊಂದಿಗೆ ಅಸಭ್ಯವಾಗಿ ವರ್ತಿಸಿದ್ದಾನೆ. ಈ ಘಟನೆ ಎರಡು ವಾರಗಳ ಹಿಂದೆ ನಡೆದಿದ್ದು, ರಾತ್ರಿ ವೇಳೆ 11 ವರ್ಷ ವಯಸ್ಸಿನ ಬಾಲಕಿಯೊಬ್ಬಳು ಐಸ್ ಕ್ರೀಮ್ ಕೊಳ್ಳಲು ಬಂದಿದ್ದು, ಆ ಸಂದರ್ಭದಲ್ಲಿ ಮಾರಾಟಗಾರ ಮೊಹಮ್ಮದ್ ಖಾಲಿದ್ ಖಾನ್ (52) ಬಾಲಕಿಯ ಮೈ ಮೇಲೆ ಕೈ ಹಾಕಿ ಅಸಭ್ಯವಾಗಿ ವರ್ತಿಸಿದ್ದಾನೆ. ಈ ಹೇಯ ಕೃತ್ಯವನ್ನು ಸ್ಥಳೀಯ ನಿವಾಸಿಯಾದ ರಮೇಶ್ ಸಾಹು ಎಂಬಾತ ರೆಕಾರ್ಡ್ ಮಾಡಿದ್ದು, ಅದನ್ನು ವಾಟ್ಸಾಪ್ ನಲ್ಲಿ ಶೇರ್ ಮಾಡಿದ್ದಾನೆ. ಈ ವಿಡಿಯೋ ವೈರಲ್ ಆಗುತ್ತಿದ್ದಂತೆ ಬಾಲಕಿಯ ತಾಯಿ ದೂರನ್ನು ನೀಡಿದ್ದು, ತಾಯಿ ನೀಡಿದ ದೂರಿನ ಮೇರೆಗೆ ಜಹಾಂಗೀರಾಬಾದ್ ಪೊಲೀಸರು ಕಾರ್ಯಾಚರಣೆ ನಡೆಸಿ ಆರೋಪಿಯನ್ನು ಬಂಧಿಸಿದ್ದಾರೆ.
ವಿಡಿಯೋ ವೈರಲ್ ಆಗುತ್ತಿದ್ದಂತೆ ಪಾಪಿಯು ತನ್ನ ಊರಿಗೆ ಪರಾರಿಯಾಗಿದ್ದಾನೆ. ಕಲ್ಪಿ ಗ್ರಾಮದಲ್ಲಿ ಪೊಲೀಸರು ಬಂಧಿಸಿದ್ದಾರೆ.
ಈ ಕುರಿತ ಪೋಸ್ಟ್ ಒಂದನ್ನು CeoVoice_ ಹೆಸರಿನ ಎಕ್ಸ್ ಖಾತೆಯಲ್ಲಿ ಹಂಚಿಕೊಳ್ಳಲಾಗಿದೆ. ವೈರಲ್ ವಿಡಿಯೋದಲ್ಲಿ ಐಸ್ ಕ್ರೀಮ್ ಕಾರ್ಟ್ ಬಳಿ ಬಂದ ಬಾಲಕಿಯನ್ನು ಹಿಡಿದ ಮಾರಾಟಗಾರ ಆಕೆಯ ಮೈ ಮೇಲೆ ಕೈ ಹಾಕಿ ಅಸಭ್ಯವಾಗಿ ವರ್ತಿಸಿದ್ದಾನೆ. ಇವನನ್ನು ಎನ್ಕೌಂಟರ್ ಮಾಡಿ ಬಿಸಾಡಬೇಕು’ ಎಂದು ಕಿಡಿಕಾರಿದ್ದಾರೆ ಎಂದು ನೆಟ್ಟಿಗರು ಕಿಡಿಕಾರಿದ್ದಾರೆ.