ರಾಯಚೂರು: ಹಟ್ಟಿ ಚಿನ್ನದ ಗಣಿಯಲ್ಲಿ (Hutti Gold Mines) ಮಣ್ಣು ಕುಸಿದ (Landslide) ಪರಿಣಾಮ ಓರ್ವ ಕಾರ್ಮಿಕ ಸಾವನ್ನಪ್ಪಿ, ಐವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ.
ಹಟ್ಟಿ ಚಿನ್ನದಗಣಿಯ ಕಂಪನಿಯ ಮಲ್ಲಪ್ಪ ಶಾಫ್ಟ್ ವಿಭಾಗದಲ್ಲಿ ಕಾರ್ಮಿಕರು ಕರ್ತವ್ಯ ನಿರ್ವಹಿಸುತ್ತಿದ್ದರು. ಈ ಸಂದರ್ಭದಲ್ಲಿ ಮಣ್ಣು ಕುಸಿದಿದೆ. ಪರಿಣಾಮ ಕಾರ್ಮಿಕ ಮೌನೇಶ್(50) ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಘಟನೆಯಲ್ಲಿ ಐವರು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ತಿಳಿದು ಬಂದಿದೆ.
ಗಾಯಗೊಂಡ ಕಾರ್ಮಿಕರನ್ನು ಗಣಿ ಕಂಪನಿಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಆಸ್ಪತ್ರೆಗೆ ಕಂಪನಿ ಕಾರ್ಯನಿರ್ವಾಹಕ ನಿರ್ದೇಶಕ ಹಾಗೂ ಪ್ರಧಾನ ವ್ಯವಸ್ಥಾಪಕರು ಭೇಟಿ ನೀಡಿದ್ದಾರೆ. ಈ ಕುರಿತು ಹಟ್ಟಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.