ಬೆಂಗಳೂರು: ಖಾಸಗಿ ವಲಯದಲ್ಲಿ ಕನ್ನಡಗಿರಿಗೆ ಉದ್ಯೋಗ ನೀಡುವ ವಿಚಾರಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದ್ದಾರೆ.
ರಾಜ್ಯದ ಖಾಸಗಿ ಕೈಗಾರಿಕೆಗಳು ಹಾಗೂ ಇತರೆ ಸಂಸ್ಥೆಗಳಲ್ಲಿ ಕನ್ನಡಿಗರಿಗೆ ಆಡಳಿತಾತ್ಮಕ ಹುದ್ದೆಗಳಿಗೆ ಶೇ.50 ಹಾಗೂ ಆಡಳಿತಾತ್ಮಕವಲ್ಲದ ಹುದ್ದೆಗಳಿಗೆ ಶೇ. 75ರಷ್ಟು ಮೀಸಲಾತಿ ನಿಗದಿಪಡಿಸುವ ವಿಧೇಯಕಕ್ಕೆ ಸೋಮವಾರ ನಡೆದ ಸಚಿವ ಸಂಪುಟ ಸಭೆಯು ಒಪ್ಪಿಗೆ ನೀಡಿದೆ ಎಂದು ಸಿಎಂ ತಿಳಿಸಿದ್ದಾರೆ. ಈ ಮೂಲಕ ಕರ್ನಾಟಕದ ಖಾಸಗಿ ಉದ್ಯಮಗಳಲ್ಲಿ ಕನ್ನಡಗರಿಗೆ ಹೆಚ್ಚಿನ ಉದ್ಯೋಗ ನೀಡುವ ಮಸೂದೆ ವಿಚಾರವಾಗಿ ಉಂಟಾಗಿದ್ದ ಗೊಂದಲಕ್ಕೆ ಸಿಎಂ ಸಿದ್ದರಾಮಯ್ಯ ತೆರೆ ಎಳೆದಿದ್ದಾರೆ.
ಸಚಿವ ಸಂತೋಷ್ ಲಾಡ್ ಅವರು ಶೇ.75 ರವರೆಗೆ ಮೀಸಲು ಎಂದು ಹೇಳಿದ್ದರೆ, ಸಿಎಂ ಸಿದ್ದರಾಮಯ್ಯ ಶೇ. 100 ರಷ್ಟು ಖಾಸಗಿ ವಲಯಗಳಲ್ಲಿ ಕನ್ನಡಿಗರಿಗೆ ಉದ್ಯೋಗ ಮೀಸಲು ನೀಡಲಾಗುವುದು ಎಂದು ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದರು. ಇದಕ್ಕೆ ಉದ್ಯಮಿಗಳು ವಿರೋಧ ವ್ಯಕ್ತಪಡಿಸಿದ್ದರು. ಹೀಗಾಗಿ ಗೊಂದಲ ಸೃಷ್ಟಿಯಾಗಿತ್ತು. ಈಗ ಸಿಎಂ ಟ್ವೀಟ್ ಮೂಲಕವೇ ಸ್ಪಷ್ಟನೆ ನೀಡಿದ್ದಾರೆ.
ಖಾಸಗಿ ಕೈಗಾರಿಕೆಗಳು ಹಾಗೂ ಇತರೆ ಸಂಸ್ಥೆಗಳಲ್ಲಿ ಕನ್ನಡಿಗರಿಗೆ ಆಡಳಿತಾತ್ಮಕ ಹುದ್ದೆಗಳಿಗೆ ಶೇ. 50 ಹಾಗೂ ಆಡಳಿತಾತ್ಮಕವಲ್ಲದ ಹುದ್ದೆಗಳಿಗೆ ಶೇ.75 ಮೀಸಲಾತಿ ನಿಗದಿಪಡಿಸುವ ವಿಧೇಯಕಕ್ಕೆ ಸಚಿವ ಸಂಪುಟ ಸಭೆಯು ಒಪ್ಪಿಗೆ ನೀಡಿದೆ. ಕನ್ನಡಿಗರು ಕನ್ನಡದ ನೆಲದಲ್ಲಿ ಉದ್ಯೋಗ ವಂಚಿತರಾಗುವುದನ್ನು ತಪ್ಪಿಸಿ, ತಾಯ್ನಾಡಿನಲ್ಲಿ ನೆಮ್ಮದಿಯ ಬದುಕು ಕಟ್ಟಿಕೊಳ್ಳಲು ಅವಕಾಶ ಕಲ್ಪಿಸಬೇಕು ಎಂಬುದು ನಮ್ಮ ಸರ್ಕಾರದ ಆಶಯ. ನಮ್ಮದು ಕನ್ನಡಪರವಾದ ಸರ್ಕಾರ. ಕನ್ನಡಿಗರ ಹಿತ ಕಾಯುವುದು ನಮ್ಮ ಆದ್ಯತೆಯಾಗಿದೆ ಎನ್ನುವುದು ಸಿದ್ದರಾಮಯ್ಯ ಅವರು ಎಕ್ಸ್ ಮೂಲಕ ಮಾಹಿತಿ ಹಂಚಿಕೊಂಡಿದ್ದಾರೆ.
ರಾಜ್ಯದ ಎಲ್ಲಾ ಖಾಸಗಿ ಕೈಗಾರಿಕೆಗಳಲ್ಲಿ “ಸಿ ಮತ್ತು ಡಿ” ದರ್ಜೆಯ ಹುದ್ದೆಗಳಿಗೆ ನೂರಕ್ಕೆ ನೂರರಷ್ಟು ಕನ್ನಡಿಗರ ನೇಮಕಾತಿಯನ್ನು ಕಡ್ಡಾಯಗೊಳಿಸುವ ವಿಧೇಯಕಕ್ಕೆ ಸಚಿವ ಸಂಪುಟ ಸಭೆಯು ಒಪ್ಪಿಗೆ ನೀಡಿದೆ. ಕನ್ನಡಿಗರು ಕನ್ನಡದ ನೆಲದಲ್ಲಿ ಉದ್ಯೋಗ ವಂಚಿತರಾಗುವುದನ್ನು ತಪ್ಪಿಸಿ, ತಾಯ್ನಾಡಿನಲ್ಲಿ ನೆಮ್ಮದಿಯ ಬದುಕು ಕಟ್ಟಿಕೊಳ್ಳಲು ಅವಕಾಶ ಕಲ್ಪಿಸಬೇಕು ಎಂಬುವುದು ನಮ್ಮ ಸರ್ಕಾರದ ಆಶಯ. ನಮ್ಮದು ಕನ್ನಡಪರವಾದ ಸರ್ಕಾರ. ಕನ್ನಡಿಗರ ಹಿತ ಕಾಯುವುದು ನಮ್ಮ ಆದ್ಯತೆಯಾಗಿದೆ ಎಂದು ಸಿಎಂ ಟ್ವೀಟ್ ಮಾಡಿದ್ದಾರೆ.