ಕೇಂದ್ರ ಸರ್ಕಾರ ಮಂಡಿಸಿದ ಬಜೆಟ್ ನಲ್ಲಿ ಹಲವಾರು ಯೋಗ್ಯ ಯೋಜನೆಗಳನ್ನು ಘೋಷಿಸಿದೆ. ಸಾಮಾನ್ಯ ವರ್ಗಕ್ಕೆ ಅನುದಾನ ನೀಡಿದೆ.
ಕೃಷಿ, ಮಹಿಳಾ, ಕೈಗಾರಿಕೆ, ರೈಲ್ವೆ ಸೇರಿದಂತೆ ಹಲವು ಕ್ಷೇತ್ರಗಳಲ್ಲಿ ಭರ್ಜರಿ ಅನುದಾನ ಮೀಸಲಿಡಲಾಗಿದೆ. ಅಲ್ಲದೇ, ತಂತ್ರಜ್ಞಾನಕ್ಕೂ ಹೆಚ್ಚು ವಿನಾಯಿತಿಗಳನ್ನು ನೀಡಲಾಗಿದೆ. ಮೊಬೈಲ್ ಫೋನ್ ಗಳು, ಮೊಬೈಲ್ ಪಿಸಿಬಿಎಗಳು ಮತ್ತು ಮೊಬೈಲ್ ಚಾರ್ಜರ್ ಮೇಲಿನ ಆಮದು ಸುಂಕವನ್ನು ಶೇಕಾಡ 20ರಿಂದ ಶೇಕಾಡ 15ಕ್ಕೆ ಇಳಿಸಲಾಗಿದೆ. ಕಳೆದ 6 ವರ್ಷಗಳಲ್ಲಿ ದೇಶೀಯ ಉತ್ಪಾದನೆಯು ಮೂರು ಪಟ್ಟು ಹೆಚ್ಚಾಗಿದೆ ಹಾಗೂ ಮೊಬೈಲ್ ಫೋನ್‌ಗಳ ರಫ್ತು 100 ಪಟ್ಟು ಹೆಚ್ಚಾಗಿದೆ ಎಂದು ಹೇಳಿದ್ದಾರೆ.
ದೇಶೀಯ ಉತ್ಪಾದನೆಯಲ್ಲಿ ಮೂರು ಪಟ್ಟು ಹೆಚ್ಚಳ ಮತ್ತು ಕಳೆದ ಆರು ವರ್ಷಗಳಲ್ಲಿ ಮೊಬೈಲ್ ಫೋನ್ ಗಳ ರಫ್ತಿನಲ್ಲಿ ಸುಮಾರು 100 ಪಟ್ಟು ಹೆಚ್ಚಳವಾಗಿದೆ ಎಂದು ಹೇಳಿದ್ದಾರೆ. ಭಾರತೀಯ ಮೊಬೈಲ್ ಉದ್ಯಮ ಅಭಿವೃದ್ಧಿ ಹೊಂದಿದೆ. ಮೊಬೈಲ್ ಫೋನ್, ಮೊಬೈಲ್ ಪಿಸಿಬಿಎ ಮತ್ತು ಮೊಬೈಲ್ ಚಾರ್ಜರ್‌ಗಳ ಮೇಲಿನ ಬಿಸಿಡಿ (ಬೇಸಿಕ್ ಕಸ್ಟಮ್ಸ್ ಡ್ಯೂಟಿ) ಅನ್ನು ಶೇ. 15ಕ್ಕೆ ಇಳಿಸಲು ಮುಂದಾಗಿದ್ದೇವೆ ಎಂದು ಹೇಳಿದ್ದಾರೆ.
ಮೊಬೈಲ್ ಫೋನ್ ತಯಾರಿಕೆಯಲ್ಲಿ ತೊಡಗಿರುವ ಹಲವಾರು ಬಿಡಿ ಭಾಗಗಳ ಮೇಲಿನ ಆಮದು ಸುಂಕವನ್ನು ಶೇ. 15 ರಿಂದ ಶೇ. 10ರವರೆಗೆ ಇಳಿಸಿದೆ. ಹ್ಯಾಂಡ್ ಸೆಟ್ ಮತ್ತು ಎಲೆಕ್ಟ್ರಾನಿಕ್ಸ್ ತಯಾರಕರು ಆಮದು ಸುಂಕವನ್ನು ಕಡಿಮೆ ಮಾಡಲು ಹಾಗೂ ವಿದೇಶಿ ಮಾರುಕಟ್ಟೆಯಲ್ಲಿ ಭಾರತೀಯ ಎಲೆಕ್ಟ್ರಾನಿಕ್ಸ್ ವಸ್ತುಗಳನ್ನು ಆಕರ್ಷಿಸಲು ಈ ಕ್ರಮ ಕೈಗೊಳ್ಳಲಾಗಿದೆ ಎಂದು ಹೇಳಿದ್ದಾರೆ.