ಮೈಸೂರು: ಪ್ರೇಮಿಗಳು ಕ್ಷುಲ್ಲಕ ಕಾರಣಕ್ಕೆ ಜಗಳ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಡೆದಿದೆ.
ಮೈಸೂರಿನ ದಟ್ಟಗಳ್ಳಿ ಹಾಗೂ ಜ್ಯೋತಿ ನಗರದಲ್ಲಿ ಈ ಘಟನೆ ನಡೆದಿದೆ.
ಪ್ರಿಯತಮನೂ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡು ಸಾವನ್ನಪ್ಪುತ್ತಿದ್ದಂತೆ, ಯುವಕ ಸಾವನ್ನಪ್ಪಿದ್ದಾನೆ.
ಮೋನಿಕಾ(20) ಹಾಗೂ ಮನು(22) ಆತ್ಮಹತ್ಯೆ ಮಾಡಿಕೊಂಡ ಪ್ರೇಮಿಗಳು. ಮಂಡಕಳ್ಳಿ ಗ್ರಾಮದ ನಿವಾಸಿ ಮೋನಿಕಾ ಹಾಗೂ ಮೈಸೂರಿನ ಜ್ಯೋತಿನಗರದ ಮನು ಕಳೆದ ಕೆಲವು ವರ್ಷಗಳಿಂದ ಪ್ರೀತಿಸುತ್ತಿದ್ದರು. ಮನೆಯಲ್ಲಿ ಇಬ್ಬರಿಗೂ ಮದುವೆ ಮಾಡಲು ತೀರ್ಮಾನಿಸಿದ್ದರು.
ಇಬ್ಬರ ಮಧ್ಯೆ ಅದ್ಯಾವುದೋ ವಿಷಯಕ್ಕೆ ಜಗಳವಾಗಿದೆ. ಹೀಗಾಗಿ ಪರಸ್ಪರ ಕಿತ್ತಾಡಿಕೊಂಡಿದ್ದಾರೆ. ಇದರಿಂದ ಬೇಸತ್ತ ಮೋನಿಕಾ ದಟ್ಟಗಳ್ಳಿಯ ಕೆಲಸ ಮಾಡುತ್ತಿದ್ದ ಮನೆಯೊಂದರಲ್ಲಿ ನೇಣಿಗೆ ಶರಣಾಗಿದ್ದಾಳೆ. ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಓಡೋಡಿ ಬಂದ ಮನು ಮೋನಿಕಾಳನ್ನ ಆಸ್ಪತ್ರೆಗೆ ದಾಖಲಿಸಿದ್ದಾನೆ. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಮೋನಿಕಾ ಸಾವನ್ನಪ್ಪಿದ್ದಾಳೆ. ಮೋನಿಕಾ ಸಾವಿಗೆ ಮನನೊಂದ ಮನು ತಾನೂ ಸಹ ಜ್ಯೋತಿನಗರದ ಮನೆಯಲ್ಲಿ ನೇಣಿಗೆ ಶರಣಾಗಿದ್ದಾನೆ. ಈ ಕುರಿತು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ.