ಪ್ಯಾರಿಸ್: 2024ರ ಒಲಿಂಪಿಕ್ಸ್ (Paris Olympics 2024) ಆರಂಭವಾಗಿದ್ದು, ಭಾರತಕ್ಕೆ ಮೊದಲ ದಿನವೇ ಸಿಹಿ ಸುದ್ದಿ ಸಿಕ್ಕಿದೆ.
ಪುರುಷರ 10 ಮೀಟರ್ ಏರ್ ಪಿಸ್ತೂಲ್ ವಿಭಾಗದಲ್ಲಿ ಭಾರತದ ಸರಬ್ಜೋತ್ ಸಿಂಗ್ ಹಾಗೂ ಅರ್ಜುನ್ ಸಿಂಗ್ ಚೀಮಾ ಅರ್ಹತಾ ಸುತ್ತಿನಲ್ಲಿ ಹೊರಬಿದ್ದು ನಿರಾಸೆ ಮೂಡಿಸಿದ್ದರು. ಆದರೆ, ಮಹಿಳೆಯರ ಸಿಂಗಲ್ಸ್‌ನಲ್ಲಿ ಮನು ಭಾಕರ್ (Manu Bhaker) ಫೈನಲ್ ಪ್ರವೇಶ ಮಾಡುವ ಮೂಲಕ ಸಿಹಿ ಸುದ್ದಿ ನೀಡಿದ್ದಾರೆ.
22 ವರ್ಷ ವಯಸ್ಸಿನ ಮನು ಭಾಕರ್ 10 ಮೀಟರ್ ಏರ್ ಪಿಸ್ತೂಲ್ (Air Pistol) ಸ್ಪರ್ಧೆಯ ಅರ್ಹತಾ ಸುತ್ತಿನಲ್ಲಿ 580 ಅಂಕಗಳೊಂದಿಗೆ 3ನೇ ಸ್ಥಾನ ಗಳಿಸುವ ಮೂಲಕ ಫೈನಲ್ ಗೆ ಅರ್ಹತೆ ಪಡೆದಿದ್ದಾರೆ. ಈ ಮೂಲಕ 20 ವರ್ಷಗಳಲ್ಲಿ ಇದೇ ಮೊದಲ ಬಾರಿಗೆ ವೈಯಕ್ತಿಕ ಸ್ಪರ್ಧೆಯಲ್ಲಿ ಒಲಿಂಪಿಕ್ಸ್ ಫೈನಲ್ ತಲುಪಿದ ಮೊದಲ ಭಾರತೀಯ ಮಹಿಳಾ ಶೂಟರ್ ಎಂಬ ದಾಖಲೆಯನ್ನು ಕೂಡ ಮನು ಬಾಕರ್ ಮಾಡಿದ್ದಾರೆ.

2004ರಲ್ಲಿ ಅಥೆನ್ಸ್ ನಲ್ಲಿ ನಡೆದ 10 ಮೀಟರ್ ಏರ್ ರೈಫಲ್ ಸ್ಪರ್ಧೆಯಲ್ಲಿ ಸುಮಾ ಶಿರೂರ್ ಫೈನಲ್ ತಲುಪಿದ್ದರು. ರಲ್ಲಿ ಹಂಗೇರಿಯ ಏಸ್ ವೆರೋನಿಕಾ ಮೇಜರ್ 582 ಅಂಕಗಳೊಂದಿಗೆ ಅಗ್ರಸ್ಥಾನ ಪಡೆದರು. ಇತರ ಭಾರತೀಯ ಪ್ರತಿನಿಧಿ ರಿದಮ್ ಸಾಂಗ್ವಾನ್ 573 ಅಂಕಗಳೊಂದಿಗೆ 15ನೇ ಸ್ಥಾನ ಪಡೆದರು. ಭಾನುವಾರ ಫೈನಲ್ ನಡೆಯಲಿದೆ.