ಮುಂಬಯಿ: ಯುವಕನೊಬ್ಬ ತನ್ನ ಪ್ರೆಯಸಿಯನ್ನು ಕೊಲೆ ಮಾಡಿ ಪೋದೆಯಲ್ಲಿ ಎಸೆದು ಹೋಗಿರುವ ಅಮಾನವೀಯ ಕೃತ್ಯವೊಂದು ನಡೆದಿದೆ.
20ರ ಹರೆಯದ ಯುವತಿಯನ್ನು ಆಕೆಯ ಪ್ರಿಯಕರನೇ (Lover) ಬರ್ಬರವಾಗಿ ಕೊಲೆ ಮಾಡಿ, ಶವವನ್ನು ರೈಲ್ವೆ ನಿಲ್ದಾಣದ (Railway Station) ಹತ್ತಿರದ ಪೋದೆಯಲ್ಲಿ ಎಸೆದಿದ್ದಾನೆ.
ಈ ಘಟನೆ ಮುಂಬೈನಲ್ಲಿ (Mumbai) ನಡೆದಿದೆ. ಯುವತಿಯ ಮೃತದೇಹ ಪೋದೆಯಲ್ಲಿ ಪತ್ತೆಯಾಗಿತ್ತು. ಆಕೆಯ ಮೃತದೇಹ ಅನೇಕ ಗಾಯದ ಗುರುತುಗಳು ಮತ್ತು ಇರಿತದ ಗಾಯಗಳಿದ್ದವು. ಯುವತಿಯನ್ನು ಯಶಶ್ರೀ ಶಿಂಧೆ ಎಂದು ಗುರುತಿಸಲಾಗಿದೆ., ಆಕೆ ನಾಪತ್ತೆಯಾಗಿದ್ದಾಳೆ ಎಂದು ದೂರು ದಾಖಲಾಗಿತ್ತು. ಈಕೆ ಊರನ್ ನಿವಾಸಿಯಾಗಿದ್ದು, ಸುಮಾರು 25 ಕಿ.ಮೀ ದೂರದ ಬೇಲಾಪುರದಲ್ಲಿ ಕೆಲಸ ಮಾಡುತ್ತಿದ್ದಳು ಎಂದು ಪೊಲೀಸರು ಹೇಳಿದ್ದಾರೆ.
ಪ್ರೀತಿ ವಿಚಾರವಾಗಿ ಕೊಲೆ ಮಾಡಲಾಗಿದೆ ಎಂದು ಮೇಲ್ನೋಟಕ್ಕೆ ಕಂಡು ಬಂದಿದೆ. ಘಟನೆ ನಂತರ ಪ್ರಿಯಕರ ನಾಪತ್ತೆಯಾಗಿದ್ದು, ಆತನ ವಿರುದ್ಧ ಪ್ರಕರಣ ದಾಖಲಾಗಿದೆ. ಸದ್ಯ ಆರೋಪಿಗಾಗಿ ಪೊಲೀಸರು ಬಲೆ ಬೀಸಿದ್ದಾರೆ.