ದೆಹಲಿ: ದೆಹಲಿ ಅಬಕಾರಿ ನೀತಿಯ ಸೂತ್ರಧಾರ ಅರವಿಂದ್ ಕೇಜ್ರಿವಾಲ್ ಎಂದು ಸಿಬಿಐ ಆರೋಪಿಸಿದೆ.
ಕೇಂದ್ರೀಯ ತನಿಖಾ ದಳ (CBI) ದೆಹಲಿ ಸಿಎಂ ಅರವಿಂದ ಕೇಜ್ರಿವಾಲ್ ರನ್ನು (Arvind Kejriwal) ದೆಹಲಿಯ ಅಬಕಾರಿ ನೀತಿ ಪ್ರಕರಣದ (Excise Policy Case) “ಸೂತ್ರಧಾರ” ಎಂದು ಆರೋಪಿಸಿದೆ.
ದೆಹಲಿ ಹೈಕೋರ್ಟ್ ನಲ್ಲಿ ಸಿಬಿಐ ವಿಶೇಷ ಪಬ್ಲಿಕ್ ಪ್ರಾಸಿಕ್ಯೂಟರ್ ಡಿಪಿ ಸಿಂಗ್ ಅವರು ದೆಹಲಿ ಸಿಎಂ ವಿರುದ್ಧ ಸೂಕ್ತ ಸಾಕ್ಷ್ಯಗಳು ಸಿಕ್ಕಾಗ ಅವರನ್ನು ಬಂಧಿಸಿತು. ಕೇಜ್ರಿವಾಲ್ ಅವರನ್ನು ಬಂಧಿಸಿದ ನಂತರ ತನಿಖಾ ಸಂಸ್ಥೆಗೆ ಸಾಕ್ಷ್ಯ ಸಿಕ್ಕಿದೆ ಎಂದು ಹೇಳಿದ್ದಾರೆ. ಹಗರಣದಲ್ಲಿ ಅರವಿಂದ್ ಕೇಜ್ರಿವಾಲ್ ನೇರವಾಗಿ ಭಾಗಿಯಾಗಿರುವ ಬಗ್ಗೆ ಸಿಬಿಐ ಬಳಿ ಸಾಕ್ಷ್ಯಗಳಿವೆ ಎಂದು ವಕೀಲರು ಹೇಳಿದ್ದಾರೆ.
ಅರವಿಂದ್ ಕೇಜ್ರಿವಾಲ್ ಅವರ ವಕೀಲ ಅಭಿಷೇಕ್ ಮನು ಸಿಂಘ್ವಿ, ಪೊಲೀಸ್ ರಿಮಾಂಡ್‌ನಲ್ಲಿರುವಾಗ ಹೊರತುಪಡಿಸಿ, ಬಂಧನದ ನಂತರ ಏಜೆನ್ಸಿ ಮುಖ್ಯಮಂತ್ರಿಯನ್ನು ವಿಚಾರಣೆ ನಡೆಸಿಲ್ಲ ಹೇಳಿದ್ದಾರೆ. ಕೇಜ್ರಿವಾಲ್ ವಿರುದ್ಧ ಏಜೆನ್ಸಿ ಬಳಿ ಯಾವುದೇ ನೇರ ಸಾಕ್ಷ್ಯಗಳಿಲ್ಲ. ಅವರ ಮನೆಯಿಂದ ಏನನ್ನೂ ವಶಪಡಿಸಿಕೊಂಡಿಲ್ಲ ಎಂದು ಹೇಳಿದ್ದಾರೆ. ಸಿಬಿಐ ಇಂದು ಕೇಜ್ರಿವಾಲ್ ಮತ್ತು ಇತರರ ವಿರುದ್ಧ ರೋಸ್ ಅವೆನ್ಯೂ ನ್ಯಾಯಾಲಯಕ್ಕೆ ಆರೋಪಪಟ್ಟಿ ಸಲ್ಲಿಕೆ ಮಾಡಿದೆ.