ತಿರುವನಂತಪುರಂ: ವಯನಾಡಿನಲ್ಲಿ ನಡೆದ ಭೂಕುಸಿತ (Wayanad Landslides) ದುರಂತದಲ್ಲಿ ಇಲ್ಲಿಯವರೆಗೆ 93 ಜನ ಸಾವನ್ನಪ್ಪಿದ್ದಾರೆ.
ಸಾವಿನ ಸಂಖ್ಯೆ ಇನ್ನೂ ಹೆಚ್ಚಾಗಬಹುದು ಎಂದು ಕೇರಳ ಸಿಎಂ ಪಿಣರಾಯಿ ವಿಜಯನ್ (Pinarayi vijayan) ಆತಂಕ ವ್ಯಕ್ತಪಡಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಯನಾಡಲ್ಲಿ ಪ್ರಕೃತಿ ವಿಕೋಪ ಉಂಟಾಗಿದೆ. ಐವರು ಸಚಿವರು ಸತತವಾಗಿ ಕೆಲಸ ಮಾಡುತ್ತಿದ್ದಾರೆ. 18 ಮೃತದೇಹಗಳನ್ನು ಕುಟುಂಬದವರಿಗೆ ಹಸ್ತಾಂತರಿಸಲಾಗಿದೆ. 34 ಮೃತದೇಹಗಳ ಗುರುತು ಪತ್ತೆಯಾಗಿದ್ದೆ. 128 ಮಂದಿ ಗಾಯಗೊಂಡಿದ್ದಾರೆ. ದುರಂತದಲ್ಲಿ 93 ಮಂದಿ ಸಾವನ್ನಪ್ಪಿದ್ದಾರೆ. ಕೆಲವು ಗುರುತು ಪತ್ತೆ ಹಚ್ಚಲು ಸಾಧ್ಯವಾಗದ ಸ್ಥಿತಿಯಲ್ಲಿ ಮೃತದೇಹಗಳು ಸಿಕ್ಕಿವೆ ಎಂದು ಸಿಎಂ ಪಣರಾಜಿ ವಿಜಯನ್ ಭಾವುಕರಾಗಿ ಹೇಳಿದ್ದಾರೆ.
ರಕ್ಷಣಾ ಕಾರ್ಯಾಚರಣೆಗೆ ಎರಡು ಹೆಲಿಕಾಪ್ಟರ್ ಸಿದ್ಧವಿದೆ. ಪ್ರತಿಕೂಲ ಹವಾಮಾನದಿಂದಾಗಿ ಹಾರಾಟ ಸಾಧ್ಯವಾಗಿಲ್ಲ. ಇನ್ನೂ ಬೆಂಗಳೂರಿನಿಂದ ಬರುವ ತಂಡಕ್ಕೆ ಟ್ರಾಫಿಕ್ ಫ್ರೀ ವ್ಯವಸ್ಥೆ ಮಾಡಿದ್ದೇವೆ. ಸಂತ್ರಸ್ತರಿಗಾಗಿ 20,000 ಲೀಟರ್ ಕುಡಿಯುವ ನೀರಿನ ವ್ಯವಸ್ಥೆ ಮಾಡಲಾಗಿದೆ. ಮದ್ರಸಾದಲ್ಲಿ ತಾತ್ಕಾಲಿಕ ಕ್ಲಿನಿಕ್ ವ್ಯವಸ್ಥೆ ಮಾಡಿದ್ದು, ವೈದ್ಯಕೀಯ ತಂಡವನ್ನು ನಿಯೋಜಿಸಿದ್ದೇವೆ ಎಂದು ಹೇಳಿದ್ದಾರೆ.
ಇಡೀ ಪ್ರದೇಶ ಕಣ್ಮರೆಯಾಗಿ 93 ಮೃತದೇಹಗಳು ಪತ್ತೆಯಾಗಿವೆ. ಸಾವು-ನೋವಿನ ಸಂಖ್ಯೆ ಇನ್ನೂ ಹೆಚ್ಚಾಗಬಹುದು. ಗಾಯಗೊಂಡಿರುವ 128 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಅನೇಕ ಜನರು ಓಡಿಹೋಗಿದ್ದಾರೆ. ನಿಲಂಬೂರ್ ಬಳಿಯ ಚಾಲಿಯಾರ್‌ನಲ್ಲಿ ಸುಮಾರು 16 ಮೃತದೇಹಗಳು ಪತ್ತೆಯಾಗಿವೆ. ದೇಹದ ಭಾಗಗಳೂ ಪತ್ತೆಯಾಗಿವೆ. ಈ ಕುರಿತು ಕಾರ್ಯಾಚರಣೆ ನಡೆಯುತ್ತಿದೆ ಎಂದು ಹೇಳಿದ್ದಾರೆ.