ರಾಷ್ಟ್ರೀಯ ಹಾಗೂ ಅಂತರಾಷ್ಟ್ರೀಯ ಮಟ್ಟದಲ್ಲಿ ರಾಜ್ಯಕ್ಕೆ ಹೆಮ್ಮೆ ತಂದ ಕ್ರೀಡಾಸಾಧಕರಿಗೆ ಸಿದ್ದರಾಮಯ್ಯ ಸರ್ಕಾರ ಸರ್ಕಾರಿ ಹುದ್ದೆ ನೀಡಿ ಗೌರವಿಸಿದೆ.
ಇಂದು ಗೃಹ ಕಚೇರಿ ಕೃಷ್ಣಾದಲ್ಲಿ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯಿಂದ ಆಯೋಜನೆಯಾಗಿದ್ದ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಸಿಎಂ ಸಿದ್ದರಾಮಯ್ಯ ಒಲಿಂಪಿಕ್ಸ್, ಪ್ಯಾರಾಲಿಂಪಿಕ್ಸ್, ಏಷಿಯನ್ ಗೇಮ್ಸ್, ಪ್ಯಾರಾ ಏಷಿಯನ್ ಗೇಮ್ಸ್ ಹಾಗೂ ಕಾಮನ್ ವೆಲ್ತ್ ಗೇಮ್ಸ್ ಗಳಲ್ಲಿ ಪದಕ ಗೆದ್ದಿದ್ದ ರಾಜ್ಯದ 12 ಕ್ರೀಡಾಪಟುಗಳಿಗೆ ಸರ್ಕಾರಿ ಉದ್ಯೋಗ ನೀಡಿದ್ದಾರೆ. 12 ಸಾಧಕರಿಗೂ ಈ ಸಂದರ್ಭದಲ್ಲಿ ಆಫರ್ ಲೆಟರ್ ನೀಡಿದ್ದಾರೆ.
ಆಫರ್ ಲೇಟರ್ ನೀಡಿ ಮಾತನಾಡಿದ ಸಿಎಂ, ಕ್ರೀಡಾಕೂಟಗಳಲ್ಲಿ ಪದಕ ಪಡೆದವರಿಗೆ ರಾಜ್ಯ ಸರ್ಕಾರ ಬೆನ್ನಿಗೆ ನಿಂತಿದೆ.. ಅದರಂತೆ ರಾಜ್ಯದ ಕ್ರೀಡಾಪಟುಗಳಿಗೆ ಸರ್ಕಾರಿ ಉದ್ಯೋಗ ನೀಡಲು ತೀರ್ಮಾನಿಸಿದ್ದೇವೆ. ಸುಮಾರು 12 ಜನರಿಗೆ ಅವಕಾಶ ಪತ್ರ ನೇರ ನೇಮಕಾತಿಗೆ ನೀಡುತ್ತಿದ್ದೇವೆ. ನಾನು 2016-17 ಒಲಂಪಿಕ್ಸ್ ಅಸೋಸಿಯೇಷನ್ ನ ಕ್ರೀಡಾಕೂಟದ ಸಮಾರಂಭದಲ್ಲಿ ಭಾಗವಹಿಸಿದ್ದೆ. ಆ ಸಂದರ್ಭದಲ್ಲಿ ರಾಜ್ಯದ ಕ್ರೀಡಾ ಸಾಧಕರಿಗೆ, ಪದಕ ಪಡೆದವರಿಗೆ ಸರ್ಕಾರದಲ್ಲಿ ಆದ್ಯತೆ ನೀಡುತ್ತೇನೆ ಎಂದು ಭರವಸೆ ನೀಡಿದ್ದೆ. ಸದ್ಯ ಹೇಳಿದಂತೆ ನಡೆದುಕೊಂಡಿದ್ದೇನೆ ಎಂದು ಹೇಳಿದ್ದಾರೆ.
ನಾನು ಮಾತು ಕೊಟ್ಟ ನಂತರ ಬಂದಿದ್ದ ಸರ್ಕಾರ ಕ್ರೀಡಾಪಟುಗಳಿಗೆ ಗೌರವ ನೀಡುವ ಕಾರ್ಯ ಮಾಡಲಿಲ್ಲ. ನಾನು ಮತ್ತೆ ಅಧಿಕಾರಕ್ಕೆ ಬಂದ್ಮೇಲೆ ಈಗ ಜಾರಿ ಮಾಡಿದ್ದೇನೆ. ಈ ಹಿಂದಿನ ಬೊಮ್ಮಾಯಿ ಸರ್ಕಾರ ಕ್ರೀಡಾ ಸಾಧಕರಿಗೆ ಪೊಲೀಸ್ ಇಲಾಖೆಯಲ್ಲಿ ಶೇ. 2 ರಷ್ಟು ಮೀಸಲಾತಿ ನೀಡಿತ್ತು. ನಾನು ಬಂದ್ಮೇಲೆ ಪೋಲಿಸ್ ಹಾಗೂ ಅರಣ್ಯ ಇಲಾಖೆಯಲ್ಲಿ ಶೇ. 3 ರಷ್ಟು ಮೀಸಲಾತಿ ಹೆಚ್ಚಿಸಿದ್ದೇನೆ. ಪದವಿ ಪಡೆದವರಿಗೆ ಗ್ರೂಪ್-ಸಿ ಉದ್ಯೋಗ ನೀಡಲು ತೀರ್ಮಾನ ಮಾಡಿದ್ದೇವೆ ಎಂದು ಹೇಳಿದ್ದಾರೆ.
ಅಲ್ಲದೇ, ಉದ್ಯೋಗಕ್ಕೆ ಸೇರಿಕೊಳ್ಳಲು 45 ವರ್ಷಗಳ ವಯೋಮಿತಿಯನ್ನ ನಿಗದಿಪಡಿಸಿದ್ದೇವೆ. ಕ್ರೀಡೆಗೆ ಹೆಚ್ಚು ಒತ್ತು ನೀಡುವ ಕೆಲಸವನ್ನು ರಾಜ್ಯ ಸರ್ಕಾರ ಮಾಡುತ್ತಿದೆ ಎಂದು ಹೇಳಿದ್ದಾರೆ.
ಯಾರಿಗೆ ಯಾವ ಹುದ್ದೆ ಸಿಕ್ಕಿದೆ ಎಂಬುದನ್ನು ನೋಡುವುದಾದರೆ..
• ಗಿರೀಶ್ ಹೆಚ್.ಎನ್ – ಕ್ಲಾಸ್ ಒನ್ ಆಫೀಸರ್ ಹುದ್ದೆ
• ಕಿಶನ್ ಗಂಗೊಳ್ಳಿ- ಗ್ರೂಪ್ ಬಿ ಹುದ್ದೆ
• ರಾಘವೇಂದ್ರ- ಗ್ರೂಪ್ ಬಿ ಹುದ್ದೆ
• ರಾಧಾ ವಿ- ಗ್ರೂಪ್ ಬಿ ಹುದ್ದೆ
• ಶರತ್ ಎಂ.ಎಸ್- ಗ್ರೂಪ್ ಬಿ ಹುದ್ದೆ
• ಗುರುರಾಜ – ಗ್ರೂಪ್ ಬಿ ಹುದ್ದೆ
• ದಿವ್ಯಾ.ಟಿ.ಎಸ್- ಗ್ರೂಪ್ ಬಿ ಹುದ್ದೆ
• ಉಷಾರಾಣಿ ಎನ್- ಗ್ರೂಪ್ ಬಿ ಹುದ್ದೆ
• ಸುಷ್ಮಿತ ಪವಾರ್ ಓ- ಗ್ರೂಪ್ ಬಿ ಹುದ್ದೆ
• ನಿಕ್ಕಿನ್ ತಿಮ್ಮಯ್ಯ ಸಿ.ಎ- ಗ್ರೂಪ್ ಬಿ
• ಎಸ್.ವಿ.ಸುನೀಲ್ -ಗ್ರೂಪ್ ಬಿ ಹುದ್ದೆ
• ಮಲಪ್ರಭಾ ಯಲ್ಲಪ್ಪ ಜಾಧವ- ಗ್ರೂಪ್ ಬಿ ಹುದ್ದೆ