ಅಯೋಧ್ಯೆ: ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಅವರು ಅಯೋಧ್ಯೆಗೆ ತೆರಳಿ ರಾಮನಿಗೆ ವಿಶೇಷ ಪೂಜೆ ಸಲ್ಲಿಸಿದ್ದಾರೆ.
ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಎರಡು ದಿನಗಳ ಪ್ರವಾಸಕ್ಕಾಗಿ ಅಯೋಧ್ಯೆಗೆ ಭೇಟಿ ನೀಡಿದ್ದಾರೆ. ಅಲ್ಲಿ ಶ್ರೀರಾಮ ಜನ್ಮಭೂಮಿ ದೇವಸ್ಥಾನದಲ್ಲಿ ಪ್ರಾರ್ಥನೆ ಸಲ್ಲಿಸಿದ್ದಾರೆ. ರಾಮ್ ಲಲ್ಲಾನ ವಿಗ್ರಹದ ಮುಂದೆ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಧಾರ್ಮಿಕ ವಿಧಿವಿಧಾನಗಳನ್ನು ನಡೆಸಿ ನಮಸ್ಕರಿಸುತ್ತಿರುವ ವಿಡಿಯೋ ಈಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಶ್ರೀರಾಮ ಜನ್ಮಭೂಮಿ ದೇವಸ್ಥಾನಕ್ಕೆ ಭೇಟಿ ನೀಡುವ ಮೊದಲು, ಸಿಎಂ ಯೋಗಿ ಆದಿತ್ಯನಾಥ್ ಅಯೋಧ್ಯೆಯ ಮತ್ತೊಂದು ಮಹತ್ವದ ಧಾರ್ಮಿಕ ಸ್ಥಳವಾದ ಹನುಮಾನ್‌ಗರ್ಹಿ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ್ದಾರೆ.
ಇತ್ತೀಚೆಗೆ ನಡೆದ ಲೋಕಸಭಾ ಚುನಾವಣೆಯಲ್ಲಿ ಉತ್ತರ ಪ್ರದೇಶದಲ್ಲಿ ಬಿಜೆಪಿ ಹೀನಾಯ ಸೋಲು ಕಂಡಿದೆ. ಅಯೋಧ್ಯೆಯಲ್ಲಿ ಕೂಡ ಬಿಜೆಪಿಗೆ ಮುಖಭಂಗವಾಗಿದೆ. ಹೀಗಾಗಿ ಮತ್ತೊಮ್ಮೆ ಬಿಜೆಪಿ ಬಲಪಡಿಸಲು ಯೋಗಿ ಹರಸಾಹಸ ಪಡುತ್ತಿದ್ದಾರೆ.