ದೆಹಲಿಯ ಮಲ್ಲಿಕಾರ್ಜುನ ಖರ್ಗೆ ನಿವಾಸದಲ್ಲಿ ಇಂದು ಮಹತ್ವದ ಚರ್ಚಾಕೂಟ ನಡೆದಿದ್ದು, ಲೋಕಸಭಾ ವಿಪಕ್ಷ ನಾಯಕ ರಾಹುಲ್ ಗಾಂಧಿಯವರನ್ನು ಉದ್ದವ್ ಠಾಕ್ರೆ ಭೇಟಿಯಾಗಿ ಮಾತುಕತೆ ನಡೆಸಿದರು. ರಾಹುಲ್ ಗಾಂಧಿ ಲೋಕಸಭೆ ವಿಪಕ್ಷ ನಾಯಕರಾದ ಬಳಿಕ ಮೊದಲ ಬಾರಿಗೆ ಭೇಟಿಯಾದ ಉದ್ದವ್ ಠಾಕ್ರೆ, ಮುಂಬರುವ ಮಹಾರಾಷ್ಟ್ರ ವಿಧಾನ ಸಭೆ ಚುನಾವಣೆ ಬಗ್ಗೆ ಮೊದಲ ಹಂತದ ಮಾತುಕತೆ ನಡೆಸಿ, ಮುಂದಿನ ನಡೆಗಳ ಬಗ್ಗೆ ಚರ್ಚಿಸಿದರು.

ಈ ಭೇಟಿಯ ವೇಳೆ ಶಿವಸೇನಾ ನಾಯಕ ಸಂಜಯ್ ರಾವುತ್ ಮತ್ತು ಪುತ್ರ ಅಧಿತ್ಯ ಠಾಕ್ರೆ ಜೊತೆ ಬಂದಿದ್ದ ಉದ್ಧವ್ ಠಾಕ್ರೆ ಚುನಾವಣೆಗೆ ಭರ್ಜರಿಯಾಗಿ ತಯಾರಾಗಿರುವಂತೆ ಹುರಪಿನಲ್ಲಿದ್ದರು. ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ, ಕಾಂಗ್ರೆಸ್ ಮುಖಂಡ ವೇಣುಗೋಪಾಲ ಹಾಗೂ ಇತರೇ ಕೆಲ ಮುಖಂಡರುಗಳು ಉಪಸ್ಥಿತರಿದ್ದರು.