ಬೆಂಗಳೂರು: ಕಿಲ್ಲರ್ ಬಿಎಂಟಿಸಿಗೆ ಸಿಲಿಕಾನ್ ಸಿಟಿಯಲ್ಲಿ ಮತ್ತೊಂದು ಬಲಿಯಾಗಿರುವ ಘಟನೆ ನಡೆದಿದೆ.
ಬೈಕ್ಗೆ ಹಿಂಬದಿಯಿಂದ ಬಿಎಂಟಿಸಿಬಸ್ (BMTC Bus) ಡಿಕ್ಕಿ ಹೊಡೆದ ಪರಿಣಾಮ ಸವಾರನು ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ ನಡೆದಿದೆ.
ಆನೇಕಲ್(Anekal) ತಾಲೂಕಿನ ಜಿಗಣಿ ಹಳೆ ಬಸ್ ನಿಲ್ದಾಣದ ಹತ್ತಿರ ಈ ಘಟನೆ ನಡೆದಿದೆ. ಮೃತ ಯುವಕನ ಗುರುತು ಇನ್ನೂ ಪತ್ತೆಯಾಗಿಲ್ಲ.
ಹಿಂಬದಿಯಿಂದ ಬೈಕ್ ಗೆ ಬಸ್ ಡಿಕ್ಕಿ ಹೊಡೆದಿದ್ದರಿಂದಾಗಿ ಬಸ್ ಚಾಲಕನ ನಿರ್ಲಕ್ಷ್ಯವೇ ಇದಕ್ಕೆ ಕಾರಣ ಎಂದು ಸ್ಥಳೀಯರು ಆರೋಪಿಸಿದ್ದಾರೆ. ಅಲ್ಲದೇ, ಆಕ್ರೋಶಗೊಂಡ ಸ್ಥಳೀಯರು ಬಸ್ನ ಗ್ಲಾಸ್ನ್ನು ಪುಡಿ ಪುಡಿ ಮಾಡಿದ್ದು, ಬಿಎಂಟಿಸಿ ಚಾಲಕನಿಗೆ ಥಳಿಸಿದ್ದಾರೆ. ಈ ಕುರಿತು ಸ್ಥಳಕ್ಕೆ ಜಿಗಣಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.