ಬೆಂಗಳೂರು: ಕಟ್ಟಡ ನಿರ್ಮಾಣದ ಸಂದರ್ಭದಲ್ಲಿ ಸೆಂಟ್ರಿಂಗ್ ಕುಸಿದು (Centering collapsed) ಮೂವರು ಕಾರ್ಮಿಕರ ಪೈಕಿ ಇಬ್ಬರು ಸಾವನ್ನಪ್ಪಿರುವ ಘಟನೆ ನಗರದಲ್ಲಿ ನಡೆದಿದೆ.
ಸಿಲಿಕಾನ್ ಸಿಟಿಯ ಪೀಣ್ಯದ ಎನ್ ಟಿಟಿಎಫ್ ರಸ್ತೆಯಲ್ಲಿ ಈ ಘಟನೆ ನಡೆದಿದೆ. ದುರಂತದಲ್ಲಿ ಕಾರ್ಮಿಕ ಹಿಮಾಂಶು (28) ಹಾಗೂ ಪ್ರಕಾಶ್ ಸಾವನ್ನಪ್ಪಿದ ದುರ್ದೈವಿಗಳು. ಮತ್ತೋರ್ವನ ಸ್ಥಿತಿ ಗಂಭೀರವಾಗಿದ್ದು, ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಘಟನಾ ಸ್ಥಳಕ್ಕೆ ಪೀಣ್ಯ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ.
ಸೆಂಟ್ರಿಂಗ್ ಹಾಕಿ ಆರ್.ಸಿ.ಸಿ ಹಾಕುವ ಕೆಲಸ ನಡೆಯುತ್ತಿದ್ದ ಸಂದರ್ಭದಲ್ಲಿ ಈ ಅವಘಡ ಸಂಭವಿಸಿದೆ. ಐದನೇ ಅಂತಸ್ತಿನಲ್ಲಿ ಕಟ್ಟಡ ಕಾಮಗಾರಿ ಕೆಲಸ ನಡೆಯುತಿತ್ತು. ಈ ಸಂದರ್ಭದಲ್ಲಿ ನಿರ್ಮಾಣ ಮಾಡುತ್ತಿದ್ದ ಸೆಂಟ್ರಿಂಗ್ ಏಕಾಏಕಿ ಕುಸಿದು ಬಿದ್ದಿದೆ. ಐದನೇ ಮಹಡಿಯಿಂದ ಕಾರ್ಮಿಕ ಹಿಮಾಂಶು ಬಿದ್ದು ಸಾವನ್ನಪ್ಪಿದ್ದಾರೆ. ಮೃತ ಕಾರ್ಮಿಕ ಯಾದಗಿರಿ ಮೂಲದವರು ಎಂದು ತಿಳಿದು ಬಂದಿದೆ.