ಸಿಎಂ ಸಿದ್ದರಾಮಯ್ಯ ಅವರ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ಹಾಗೂ ಜೆಡಿಎಸ್ ದೋಸ್ತಿ ನಡೆಸಿದ್ದ ಪಾದಯಾತ್ರೆ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಈ ಹಿನ್ನೆಲೆಯಲ್ಲಿ ಶನಿವಾರ ಇಡೀ ಮೈಸೂರು ಕೇಸರಿಮಯವಾಗಿತ್ತು. ಈ ಸಂದರ್ಭದಲ್ಲಿ ನಾಯಕರು ಕಾಂಗ್ರೆಸ್ ವಿರುದ್ಧ ಗುಡುಗಿದ್ದಾರೆ.
ಬಿಜೆಪಿ, ಜೆಡಿಎಸ್ ದೋಸ್ತಿ ನಾಯಕರು ಭರ್ಜರಿ ಶಕ್ತಿ ಪ್ರದರ್ಶಿಸಿದ್ದಾರೆ. ಈ ವೇಳೆ ಮುಡಾ ಪ್ರಕರಣದ ನೈತಿಕ ಹೊಣೆ ಹೊತ್ತು ಸಿಎಂ ಸಿಎಂ ಸಿದ್ದರಾಮಯ್ಯ ರಾಜೀನಾಮೆ ನೀಡಬೇಕು ಎಂದು ದೋಸ್ತಿ ನಾಯಕರು ಆಗ್ರಹಿಸಿದ್ದಾರೆ. ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ, ಬಿಎಸ್ ಯಡಿಯೂರಪ್ಪ, ಡಿ.ವಿ. ಸದಾನಂದಗೌಡ, ಬಸವರಾಜ ಬೊಮ್ಮಾಯಿ ಸೇರಿದಂತೆ ಹಲವು ನಾಯಕರು ಸಿಎಂ ಸಿದ್ದರಾಮಯ್ಯ ಹಾಗೂ ಡಿಕೆಶಿ ವಿರುದ್ಧ ಗುಡುಗಿದರು.
ಬಿಜೆಪಿ-ಜೆಡಿಎಸ್ ದೋಸ್ತಿ ಎಂಟು ದಿನಗಳ ಕಾಲ ಒಟ್ಟು 135 ಕಿ.ಮೀ. ಪಾದಯಾತ್ರೆ ನಡೆಸಿತು. ಈ ಹಿನ್ನೆಲೆಯಲ್ಲಿ ಶನಿವಾರ ಮೈಸೂರಿನ ಮಹಾರಾಜ ಮೈದಾನದಲ್ಲಿ ಸಮಾರೋಪ ಸಮಾರಂಭ ನಡೆಯಿತು. ಸಿದ್ದರಾಮಯ್ಯ ನಿಮ್ಮನ್ನು ಮನೆಗೆ ಕಳುಹಿಸುತ್ತೇನೆ. ನಿಮ್ಮನ್ನು ಮನೆಗೆ ಕಳುಹಿಸದೇ ಬಿಡುವುದಿಲ್ಲ ಎಂದು ಯಡಿಯೂರಪ್ಪ ಗುಡುಗಿದ್ದಾರೆ.
ಕೇಂದ್ರ ಸಚಿವ ಡಿ ಕುಮಾರಸ್ವಾಮಿ ಡಿಸಿಎಂ ಡಿಕೆ ಶಿವಕುಮಾರ್ ಅವರನ್ನೇ ಟಾರ್ಗೆಟ್ ಮಾಡಿ ಮಾತನಾಡಿದ್ದಾರೆ. ಅಲ್ಲದೇ, ಡಿಕೆಶಿ ಆರೋಪಿಗಳಿಗೆ ತಿರುಗೇಟು ನೀಡಿದ್ದಾರೆ. 5,000 ನಿವೇಶನಗಳನ್ನ ನುಂಗಿದ ಆ 14 ನಿವೇಶನ ಅಂತಾ ಮುಡಾ ಹಗರಣದ ಪುಸ್ತಕವನ್ನು ಸಮಾರೋಪ ಸಮಾರಂಭದಲ್ಲಿ ಬಿಡುಗಡೆ ಮಾಡಲಾಯಿತು. ಸಾವಿರಾರು ಸಂಖ್ಯೆಯಲ್ಲಿ ಎರಡೂ ಪಕ್ಷದ ಕಾರ್ಯಕರ್ತರು ಭಾಗವಹಿಸಿದ್ದರು.