ಮಂಗಳೂರು: ಪಾಗಲ್ ಪ್ರೇಮಿಯೊಬ್ಬಾತ ಪ್ರೇಮ ಪೈಫಲ್ಯದಿಂದ ವಿದ್ಯಾರ್ಥಿನಿಗೆ ಕತ್ತರಿಯಿಂದ ಇರಿದಿರುವ ಘಟನೆ ನಡೆದಿದೆ.
ದಕ್ಷಿಣ ಕನ್ನಡ ಜಿಲ್ಲೆಯ ಮೂಡಬಿದರೆಯಲ್ಲಿನ ಆಳ್ವಾಸ್ ಕಾಲೇಜಿನಲ್ಲಿ ಈ ಘಟನೆ ನಡೆದಿದೆ. ತುಮಕೂರು ಮೂಲದ ಮಂಜುನಾಥ್ ಎಂಬ ವಿದ್ಯಾರ್ಥಿ, ತನ್ನ ಮೆಸೆಜ್ ಗಳಿಗೆ ಉತ್ತರಿಸುತ್ತಿಲ್ಲ ಎಂಬ ಕಾರಣಕ್ಕೆ ಊರಿಂದ ನೇರವಾಗಿ ಕಾಲೇಜಿಗೆ ಬಂದು ವಿದ್ಯಾರ್ಥಿನಿಯ ಕುತ್ತಿಗೆಗೆ ಕತ್ತರಿಯಿಂದ ಇರಿದಿದ್ದಾನೆ ಎನ್ನಲಾಗಿದೆ.
ಸದ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ಮಂಜುನಾಥ್ ಹಾಗು ಯುವತಿ ಪಿಯುಸಿವರೆಗೆ ಜೊತೆಯಲ್ಲಿಯೇ ಓದಿದ್ದಾರೆ. ಕಾಲೇಜು ತೊರೆದು ಮಂಜುನಾಥ್ ಮನೆಗೆ ತೆರಳಿದ್ದ. ಆದರೆ, ಯುವತಿ ಕಾಲೇಜನಲ್ಲಿ ವ್ಯಾಸಂಗ ಮುಂದುವರೆಸಿದ್ದಳು. ಜೊತೆಗೆ ಯುವತಿಯ ಭೇಟಿಗೆ ಹಲವು ಮಂಜುನಾಥ ಯತ್ನಿಸಿದ್ದ. ಆದರೆ, ಭೇಟಿ ಸಾಧ್ಯವಾಗಿರಲಿಲ್ಲ. ಹೀಗಾಗಿ ಮಂಜುನಾಥ್ ಕುಪಿತಗೊಂಡಿದ್ದ.
ಹೀಗಾಗಿ ನೇರವಾಗಿ ಕಾಲೇಜಿಗೆ ತೆರಳಿ ಈ ಕೃತ್ಯ ಎಸಗಿದ್ದಾನೆ. ಘಟನೆಯಲ್ಲಿ ವಿದ್ಯಾರ್ಥಿನಿಯ ಮುಖಕ್ಕೆ ಸಣ್ಣ ಪುಟ್ಟ ಗಾಯಗಳಾಗಿವೆ. ಸದ್ಯ ಯುವಕನನನ್ನು ಹಿಡಿದು ವಿದ್ಯಾರ್ಥಿಗಳು ಪೊಲೀಸರಿಗೆ ಒಪ್ಪಿಸಿದ್ದು, ಆತನ ವಿರುದ್ಧ ಕೊಲೆ ಯತ್ನ ಪ್ರಕರಣ ದಾಖಲಾಗಿದೆ.