ಪಾಪಿ ತಂದೆಯೊಬ್ಬ ಕುಡಿದ ಅಮಲಿನಲ್ಲಿ ತನ್ನ ಅಪ್ರಾಪ್ತ ಮಗಳ ಮೇಲೆಯೇ ಅತ್ಯಾಚಾರ ನಡೆಸಿರುವ ಅಮಾನವೀಯ ಘಟನೆ ನಡೆದಿದೆ.
ಉತ್ತರ ಪ್ರದೇಶದ ಅಮೇಥಿಯಲ್ಲಿ ಈ ಘಟನೆ ನಡೆದಿದೆ. ಈ ಘಟನೆ ಆಗಸ್ಟ್ 8ರಂದು ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಮನೆಯಲ್ಲಿ ಅಪ್ರಾಪ್ತ ಮಗಳು ಒಬ್ಬಳೇ ಇದ್ದಾಗ ಈ ಘಟನೆ ನಡೆದಿದೆ. ಬಾಲಕಿ ಆಗಸ್ಟ್ 14ರಂದು ಈ ಕುರಿತು ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದು, ಪೊಲೀಸರು ಆರೋಪಿಗಾಗಿ ಬಲೆ ಬೀಸಿದ್ದಾರೆ.
ದೆಹಲಿಯಲ್ಲಿ ತನ್ನ ಸಹೋದರಿಯ ಮನೆಗೆ ಹೋಗಿದ್ದ ಆಕೆಯ ತಾಯಿ ಆಗಸ್ಟ್ 10ರಂದು ನಿಧನರಾಗಿದ್ದಾರೆ. ಹೀಗಾಗಿ ಮಗಳು ಮತ್ತಷ್ಟು ದುಃಖದಲ್ಲಿ ನೋವು ಕಳೆಯುವಂತಾಗಿತ್ತು. ತನ್ನ ಕಷ್ಟ ಯಾರ ಮುಂದೆ ಹೇಳಬೇಕು ಎಂಬ ಆತಂಕದಲ್ಲಿ ಎರಡು ದಿನ ಕಳೆದು, ಈಗ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಸದ್ಯ ದೂರು ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಕೈಗೊಂಡಿದ್ದಾರೆ.