ಬೆಂಗಳೂರು: ಮದ್ಯ ಸೇವಿಸಿ ತೆರಳುತ್ತಿದ್ದ ಯುವತಿಯನ್ನು ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಅತ್ಯಾಚಾರ ನಡೆಸಿರುವ ಪ್ರಕರಣ ಸಿಲಿಕಾನ್ ಸಿಟಿಯನ್ನೇ ಬೆಚ್ಚಿ ಬೀಳಿಸಿದೆ. ಸದ್ಯ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯ ಸುಳಿವನ್ನು ಪೊಲೀಸರು ಪತ್ತೆ ಮಾಡಿದ್ದಾರೆ ಎಂದು ತಿಳಿದು ಬಂದಿದೆ.
ಹೊರ ರಾಜ್ಯದ ಸಂತ್ರಸ್ಥೆ ಬೆಂಗಳೂರಿನಲ್ಲಿ (Bengaluru) ಫೈನಲ್ ಇಯರ್ ಡಿಗ್ರಿ ವ್ಯಾಸಂಗ ಮಾಡುತ್ತಿದ್ದಾರ ಎಂದು ತಿಳಿದು ಬಂದಿದೆ. ಆದರೆ, ಶನಿವಾರ ತಡರಾತ್ರಿ ಓರ್ವ ವ್ಯಕ್ತಿಯಿಂದ ಅತ್ಯಾಚಾರ ನಡೆದಿರುವ ಶಂಕೆ ವ್ಯಕ್ತವಾಗಿದೆ. ಈಗ ಪೊಲೀಸರು ಆರೋಪಿಯ ಗುರುತು ಪತ್ತೆ ಮಾಡುವಲ್ಲಿ ಯಶಸ್ವಿಯಾಗಿದ್ದಾರೆ ಎನ್ನಲಾಗಿದೆ.
ಘಟನೆ ಸಂಬಂಧ ಪೂರ್ವ ವಲಯ ಹೆಚ್ಚುವರಿ ಪೊಲೀಸ್ ಆಯುಕ್ತ ರಮಣ್ ಗುಪ್ತಾ ಪ್ರತಿಕ್ರಿಯೆ ನೀಡಿದ್ದು, ಯುವತಿ ತಡ ರಾತ್ರಿ 1.30ಕ್ಕೆ ಲಿಫ್ಟ್ ಪಡೆದಿದ್ದಾಳೆ. ಈ ಸಂದರ್ಭದಲ್ಲಿ ಅತ್ಯಾಚಾರ ಯತ್ನ ನಡೆದಿರುವ ಆರೋಪ ಕೇಳಿ ಬಂದಿದೆ. ಯುವತಿ ವಿದ್ಯಾರ್ಥಿನಿಯಾಗಿದ್ದು, ಆರೋಪಿಯ ಪತ್ತೆಗೆ ಐವರ ತಂಡ ರಚಿಸಲಾಗಿದೆ ಎಂದು ಹೇಳಿದ್ದಾರೆ.
ಶನಿವಾರ ರಾತ್ರಿ ಸ್ನೇಹಿತರೊಂದಿಗೆ ಪಾರ್ಟಿಗೆ ಬಂದಿದ್ದ ಯುವತಿ, ಪಾರ್ಟಿ ಮುಗಿಸಿ ಮರಳಿ ಹೋಗುವಾಗ ಸ್ನೇಹಿತರ ಕಾರು ಆಟೋವೊಂದಕ್ಕೆ ಟಚ್ ಆಗಿದೆ. ಹೀಗಾಗಿ ಫೋರಂ ಮಾಲ್ ಹತ್ತಿರ ಟಾನಿಕ್ ಮುಂಭಾಗ ಆಟೊ ಚಾಲಕ ಹಾಗೂ ಸಂತ್ರಸ್ಥೆ ಯುವತಿಯ ಸ್ನೇಹಿತರ ಮಧ್ಯೆ ಗಲಾಟೆ ನಡೆದಿದೆ. ಈ ವೇಳೆ ಸ್ಥಳಕ್ಕೆ ಹೊಯ್ಸಳ ವಾಹನ ಕೂಡ ಬಂದಿತ್ತು. ಆಗ ಬೈಕ್ ಒಂದರಲ್ಲಿ ಡ್ರಾಪ್ ತೆಗೆದುಕೊಂಡು ಯುವತಿ ಅಲ್ಲಿಂದ ಹೋಗಿದ್ದಾಳೆ. ನಂತರ ಮಾರ್ಗ ಮಧ್ಯೆ ಇಳಿದು ಮತ್ತೊಂದು ಬೈಕ್ ನಲ್ಲಿ ಡ್ರಾಪ್ ಪಡೆದಿದ್ದಾಳೆ. ಆಗ ಚಾಲಕ ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಯುವತಿಯ ಮೇಲೆ ಅತ್ಯಾಚಾರ ಎಸಗಿದ್ದಾನೆ ಎಂದು ತಿಳಿದು ಬಂದಿದೆ.
ಯುವತಿ ಎಮರ್ಜೆನ್ಸಿ ನಂಬರ್ ಗಳಾಗಿ ತಂದೆ ಮತ್ತು ಸ್ನೇಹಿತೆಯ ನಂಬರ್ ಇಟ್ಟಿದ್ದಳು. ಮೊಬೈಲ್ ಮೂಲಕ ಎಮರ್ಜೆನ್ಸಿ ನಂಬರ್ ಗೆ ಕರೆ ಹೋದಾಗ ಸಂತ್ರಸ್ತೆಯ ತಂದೆ ಮಗಳ ಗೆಳತಿಗೆ ಕರೆ ಮಾಡಿದ್ದರು. ಸ್ನೇಹಿತರು ಬಂದು ನೋಡಿದಾಗ ಸಂತ್ರಸ್ತೆಯ ಸ್ಥಿತಿ ಶೋಚನೀಯವಾಗಿತ್ತು ಎನ್ನಲಾಗಿದೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು 40 ಜನರ ತಂಡ ರಚಿಸಿ ಆರೋಪಿಗಾಗಿ ಟೀಂ ರಚನೆ ಮಾಡಿ ಆರೋಪಿಗಾಗಿ ಹುಡುಕಾಟ ನಡೆಯುತ್ತಿದೆ.