ಯಾದಗಿರಿ: ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿರುವ ವಿಚಾರವಾಗಿ ರಾಜ್ಯದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸುತ್ತಿದ್ದಾರೆ.
ನಗರದ ಸುಭಾಷ್ ವೃತ್ತದಲ್ಲಿ ಕಲ್ಯಾಣ ಕರ್ನಾಟಕದ ಸಿದ್ದರಾಮಯ್ಯ (Siddaramaiah) ಅಭಿಮಾನಿ ಬ್ರಿಗೇಡ್ ರಾಜ್ಯಾಧ್ಯಕ್ಷ ರಾಜಕುಮಾರ್ ಗಣೇಶ್ ಉಪವಾಸ ಸತ್ಯಾಗ್ರಹಕ್ಕೆ ಕುಳಿತಿದ್ದರು. ಆದರೆ, ಅವರು ಸತ್ಯಾಗ್ರಹ ನಿರತವಾಗಿರುವಾಗಲೇ ಅಸ್ವಸ್ಥರಾಗಿದ್ದಾರೆ. ಬೆಳಿಗ್ಗೆಯಿಂದಲೇ ರಾಜಕುಮಾರ್ ಏಕಾಂಗಿ ಹೋರಾಟ ಮಾಡುತ್ತಿದ್ದರು. ಈ ಸಂದರ್ಭದಲ್ಲಿ ನಿತ್ರಾಣಗೊಂಡು ಅಸ್ವಸ್ಥಗೊಂಡಿದ್ದಾರೆ. ಕೂಡಲೇ ಅವರನ್ನು ಯಾದಗಿರಿ ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ.