ಕೋಲಾರ: ವ್ಹೀಲಿಂಗ್ ಹಾವಳಿಗೆ (Road Accident) ಅರ್ಚಕರೊಬ್ಬರು ಬಲಿಯಾಗಿರುವ ಘಟನೆ ನಡೆದಿದೆ.
ಈ ಘಟನೆ ಜಿಲ್ಲೆಯ ಬಂಗಾರಪೇಟೆ ನಗರದ ವಿವೇಕಾನಂದ ರಸ್ತೆಯಲ್ಲಿನ ಬಸ್ ನಿಲ್ದಾಣದ ಹತ್ತಿರ ನಡೆದಿದೆ. ಗಾಂಧಿನಗರದ ಆಂಜನೇಯಸ್ವಾಮಿ ದೇವಾಲಯದ ಅರ್ಚಕ ಗೋಪಾಲ (45) ಸಾವನ್ನಪ್ಪಿದ ಅರ್ಚಕ ಎನ್ನಲಾಗಿದೆ.
ಬುಧವಾರ ರಾತ್ರಿ 10 ಗಂಟೆಯ ವೇಳೆಗೆ ವ್ಹೀಲಿಂಗ್ ಮಾಡುತ್ತಿದ್ದ ಇಬ್ಬರು ಅಪ್ರಾಪ್ತರಿಂದ ಬೈಕ್ ಡಿಕ್ಕಿಯಾದ ಪರಿಣಾಮ ಈ ಘಟನೆ ಸಂಭವಿಸಿದೆ. ಗಾಯಗೊಂಡಿದ್ದ ಅರ್ಚಕ ಗೋಪಾಲ ಅವರನ್ನು ಸ್ಥಳೀಯರ ಸಹಾಯದಿಂದ ಕೋಲಾರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಆದರೆ, ಅವರು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ. ಬಂಗಾರಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಸಲಾಗುತ್ತಿದೆ. ಈ ಘಟನೆಗೆ ಸಾರ್ವಜನಿಕರು ತೀವ್ರ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.