ಬೆಂಗಳೂರು: ಅಕ್ರಮ ಆಸ್ತಿ ಗಳಿಕೆ ಪ್ರಕರಣವನ್ನು ರಾಜ್ಯ ಸರ್ಕಾರ ಸಿಬಿಐನಿಂದ ಲೋಕಾಯುಕ್ತಕ್ಕೆ ವರ್ಗಾವಣೆ ಮಾಡಿದೆ. ಆದರೆ, ಸಿಬಿಐ ಮಾತ್ರ ತನಿಖೆ ಮುಂದುವರೆಸಿದೆ. ಅವರು ನನ್ನ ಕುಟುಂಬಸ್ಥರಿಗೆ, ಸ್ನೇಹಿತರಿಗೆ ತುಂಬಾ ಕಿರುಕುಳ ನೀಡುತ್ತಿದ್ದಾರೆ. ಇದೇ ಕೆಸವನ್ನು ಲೋಕಾಯುಕ್ತ ಕೂಡ ಮುಂದುವರಿಸಿದೆ, ಅದರಿಂದಲೂ ಕಿರುಕುಳ ಆಗುತ್ತಿದೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ (DK Shivakumar) ಆರೋಪಿಸಿದ್ದಾರೆ.
ಲೋಕಾಯುಕ್ತ ವಿಚಾರಣೆ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಲೋಕಾಯುಕ್ತ ಸಂಸ್ಥೆಯು ಕಳೆದ 6 ತಿಂಗಳಿನಿಂದ ತನಿಖೆ ಮಾಡುತ್ತಿದೆ. ಎರಡು ಗಂಟೆಗಳಿಗೂ ಹೆಚ್ಚು ಕಾಲ ನನ್ನನ್ನು ವಿಚಾರಣೆ ಮಾಡಿದೆ. ಆದರೆ, ಲೋಕಾಯುಕ್ತಕ್ಕಿಂತ ಸಿಬಿಐನವರೇ ಪರವಾಗಿಲ್ಲ. ಲೋಕಾಯುಕ್ತದ ಚಿತ್ರ-ವಿಚಿತ್ರ ಪ್ರಶ್ನೆ ಕೇಳುತ್ತಿದ್ದಾರೆ. ಒಂದು ದಿನವೂ ವಿಚಾರಣೆಗೆ ಕರೆಯಲಿಲ್ಲ. ಆದರೆ ಲೋಕಾಯುಕ್ತದವರು ಈಗ ಹಿಂಸೆ ಕೊಡುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.
ಲೋಕಾಯುಕ್ತ ಅಧಿಕಾರಿಗಳು ಆ. 21ರಂದು ವಿಚಾರಣೆಗೆ ಹಾಜರಾಗಲು ನೋಟಿಸ್ ನೀಡಿದ್ದರು. ಆದರೆ, ಗುರುವಾರ ಹಾಜರಾಗುತ್ತೇನೆ ಎಂದು ಮನವಿ ಮಾಡಿದ್ದೆ ಎಂದು ಹೇಳಿದ್ದಾರೆ.