ಬೆಂಗಳೂರು: 25 ಸಾವಿರ ಬಡ ವಿದ್ಯಾರ್ಥಿಗಳಿಗೆ ಉಚಿತವಾಗಿ ನೀಟ್(NEET) ತರಬೇತಿ ನೀಡಲಾಗುವುದು ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ (Madhu Bangarappa) ತಿಳಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಸಕ್ತ ಸಾಲಿನಿಂದಲೇ ಪಿಯುಸಿಯಲ್ಲಿ ವ್ಯಾಸಂಗ ಮಾಡುತ್ತಿರುವ ಬಡ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಉಚಿವಾಗಿ ನೀಟ್ ತರಬೇತಿ ನೀಡಲಾಗುತ್ತದೆ ಎಂದು ತಿಳಿಸಿದ್ದಾರೆ. ಉತ್ತಮ ತಜ್ಞರಿಂದಲೇ ತರಬೇತಿ ನೀಡಲಾಗುತ್ತದೆ. ಇದಕ್ಕಾಗಿ 12 ಕೋಟಿ ರೂ. ಖರ್ಚು ಮಾಡಲಾಗುತ್ತಿದೆ. ಆನ್ ಲೈನ್ ನಲ್ಲೂ ತರಬೇತಿ ನೀಡಲಾಗುವುದು. ಈ ಮೂಲಕ ಬಡ ವಿದ್ಯಾರ್ಥಿಗಳ ಕನಸು ಈಡೇರಿಸಲು ಸಹಾಯ ಮಾಡಲಾಗುವುದು. ಇದರಿಂದಾಗಿ ಪ್ರತಿಭಾವಂತರಿಗೆ ಉಪಯೋಗವಾಗುತ್ತದೆ ಎಂದು ಹೇಳಿದ್ದಾರೆ.
ವಿದ್ಯಾರ್ಥಿಗಳ ಆಯ್ಕೆಗಾಗಿ ಇಲಾಖೆ ಪರೀಕ್ಷೆ ನಡೆಸಲಿದೆ. ಪರೀಕ್ಷೆ ಮೂಲಕ 25 ಸಾವಿರ ವಿದ್ಯಾರ್ಥಿಗಳನ್ನು ಆಯ್ಕೆ ಮಾಡಿ ತರಬೇತಿ ನೀಡಲಾಗುವುದು ಎಂದು ಹೇಳಿದ್ದಾರೆ.
8,9,10ನೇ ತರಗತಿ ವಿಜ್ಞಾನ ವಿದ್ಯಾರ್ಥಿಗಳಿಗೆ ವಿಶೇಷ ತರಬೇತಿ ನೀಡುವ ಮರು ಸಿಂಚನ ಕಾರ್ಯಕ್ರಮ ಜಾರಿ ಮಾಡಿದ್ದೇವೆ. ತಿಂಗಳದ ಮೂರನೇ ಶನಿವಾರ ಬ್ಯಾಗ್ ಲೆಸ್ ಡೇ ಇರುತ್ತದೆ. ಶಿಕ್ಷಕರು ಕಡ್ಡಾಯವಾಗಿ ಇದನ್ನು ಪಾಲಿಸಬೇಕು. ಬ್ಯಾಗ್ ಲೆಸ್ ಮಾಡದೆ ಇದ್ದರೆ ಕಾನೂನು ಕ್ರಮ ತಗೆದುಕೊಳ್ಳುತ್ತೇವೆ. ಬ್ಯಾಗ್ ಹೊರೆ ಕಡಿಮೆ ಮಾಡಲು ಪಾರ್ಟ್ – 1 ಪಾರ್ಟ್ – 2 ಎಂದು ಹೇಳಿದ್ದಾರೆ.