ಉಡುಪಿ: ಮತ್ತು ಬರುವ ಔಷಧ ನೀಡಿ ಅತ್ಯಾಚಾರ ನಡೆಸಿರುವ ಘಟನೆ ಕಾರ್ಕಳದಲ್ಲಿ (Karkala news) ಬೆಳಕಿಗೆ ಬಂದಿದೆ.
ಬರ್ಬರ ಅತ್ಯಾಚಾರ (Physical Abuse) ಪ್ರಕರಣ ಬೆಳಕಿಗೆ ಬರುತ್ತಿದ್ದಂತೆ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ಇನ್ ಸ್ಟಾಗ್ರಾಂನಲ್ಲಿ (Instagram) ಸ್ನೇಹ ಬೆಳೆಸಿದ ಹಿಂದೂ ಯುವತಿಯನ್ನು (Hindu girl) ಕರೆದೊಯ್ದ ಮುಸ್ಲಿಂ ಯುವಕ, ಬಿಯರ್ ನಲ್ಲಿ ಮತ್ತು ಬರಿಸುವ ಔಷಧ ಸೇರಿಸಿ ಅತ್ಯಾಚಾರ ಎಸಗಿದ್ದಾನೆ ಎನ್ನಲಾಗಿದೆ. ಈತನ ಕೃತ್ಯಕ್ಕೆ ಆತನ ಸ್ನೇಹಿತರು ಸಹಕರಿಸಿದ್ದಾರೆ ಎನ್ನಲಾಗಿದೆ.
ಹೀಗಾಗಿ ಕಾರ್ಕಳ ನಗರದಲ್ಲಿ ಕೋಮು ಉದ್ವಿಗ್ನತೆ ಉಂಟಾಗಿದೆ. ಹಿಂದೂ ಸಂಘಟನೆಗಳ ಕಾರ್ಯಕರ್ತರು ಠಾಣೆಯ ಮುಂದೆ ಜಮಾವಣೆಗೊಂಡು ಯುವಕನ ಮೇಲೆ ಕಠಿಣ ಕ್ರಮಕ್ಕೆ ಆಗ್ರಹಿಸಿದ್ದಾರೆ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಅರುಣ್ ಕುಮಾರ್ ಈ ಕುರಿತು ಹೇಳಿಕೆ ನೀಡಿದ್ದಾರೆ.
ಯುವತಿಯನ್ನು ಅಪಹರಿಸಿ ಅತ್ಯಾಚಾರ ನಡೆಸಿರುವ ಕುರಿತು ದೂರು ಬಂದಿದೆ. ಸಂತ್ರಸ್ತೆಗೆ ಆರೋಪಿ ಜೊತೆಗೆ ಮೂರು ತಿಂಗಳಿಂದ ಪರಿಚಯವಿತ್ತು. ಇನ್ಸ್ಟಾಗ್ರಾಮ್ ಮೂಲಕ ಪರಸ್ಪರ ಪರಿಚಯ ಹೊಂದಿದ್ದರು. ಆರೋಪಿ ಅಲ್ತಾಫ್ ಕರೆ ಮಾಡಿ ಸಂತ್ರಸ್ತೆಗೆ ಬರಲು ಹೇಳಿದ್ದ. ಯುವತಿ ಬರುತ್ತಿದ್ದಂತೆ ಅಪಹರಿಸಿದ್ದ. ಬಿಯರ್ ನಲ್ಲಿ ಏನನ್ನೊ ಬೆರೆಸಿ ಕುಡಿಸಿ ಮತ್ತು ಬರಿಸಿ ಅತ್ಯಾಚಾರ ಮಾಡಿರುವುದಾಗಿ ಯುವತಿ ಆರೋಪಿಸಿದ್ದಾರೆ ಎಂದು ಹೇಳಿದ್ದಾರೆ. ಸದ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ಬಂಧಿಸಲಾಗಿದೆ ಎಂದು ಕೂಡ ಹೇಳಿದ್ದಾರೆ.
ಆರೋಪಿಗೆ ಬಿಯರ್ ತಂದುಕೊಟ್ಟಿದ್ದ ಇಬ್ಬರ ಪೈಕಿ ಓರ್ವನನ್ನು ಕೂಡ ಬಂಧಿಸಲಾಗಿದೆ. ಯುವತಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಸದ್ಯ ಆರೋಪಿಗಳಿಗೆ ಉಗ್ರ ಶಿಕ್ಷೆ ವಿಧಿಸುವಂತೆ ಆಗ್ರಹಿಸಲಾಗುತ್ತಿದೆ.