ತುಮಕೂರು: ತಾನು ಪ್ರೀತಿಸಿದ ಹುಡುಗಿಯೊಂದಿಗೆ ಮಾತನಾಡಿದ್ದಾನೆಂಬ ಕಾರಣಕ್ಕೆ ವಿದ್ಯಾರ್ಥಿ ಮೇಲೆ ಹಲ್ಲೆ ನಡೆಸಿರುವ ಘಟನೆ ನಡೆದಿದೆ.
ಕ್ಷುಲ್ಲಕ ಕಾರಣಕ್ಕೆ ಹಲ್ಲೆ ನಡೆಸಿರುವ ಘಟನೆ ತುಮಕೂರು ನಗರದ ವಿದ್ಯಾನಿಧಿ ಕಾಲೇಜು ಹತ್ತಿರ ನಡೆದಿದೆ. ಜಯವರ್ದನ್ ಹಲ್ಲೆಗೊಳಗಾದ ವಿದ್ಯಾರ್ಥಿ. ಮನೋಜ್, ಗಣೇಶ್ ಎಂಬುವವರು ಹಲ್ಲೆ ನಡೆಸಿದ್ದಾರೆ. ವಿದ್ಯಾನಿಧಿ ಕಾಲೇಜಿನಲ್ಲಿ ದ್ವಿತೀಯ ಪಿಯುಸಿ ಓದುತ್ತಿರುವ ಜಯವರ್ಧನ್, ಬೆಂಗಳೂರಿನ ಬಿಎಂಎಸ್ ಕಾಲೇಜಿನಲ್ಲಿ ಡಿಗ್ರಿ ಓದುತ್ತಿರುವ ಆರೋಪಿ ಮನೋಜ್ ಪ್ರೀತಿಸುತ್ತಿದ್ದ ಯುವತಿಯನ್ನು ಮಾತನಾಡಿಸಿದ್ದಾನೆ ಎನ್ನಲಾಗಿದೆ.
ಆರೋಪಿ ಪ್ರೀತಿಸುತ್ತಿದ್ದ ವಿದ್ಯಾರ್ಥಿನಿ ಜೊತೆಗೆ ಜಯವರ್ದನ್ ಸಲುಗೆಯಿಂದ ಇದ್ದಾನೆ ಎಂಬ ಕಾರಣಕ್ಕೆ ಹಲ್ಲೆ ನಡೆಸಿದ್ದಾನೆ. ‘ನಮ್ಮ ಹುಡುಗಿ ಜೊತೆ ಯಾಕೆ ಮಾತನಾಡ್ತಿಯಾ ಅಂತ ಜಯವರ್ಧನ್ ಗೆ ಪೋನ್ ನಲ್ಲಿ ಬೆದರಿಕೆ ಹಾಕಿದ್ದಾನೆ. ಅಲ್ಲದೇ ಕಾಲೇಜು ಬಳಿ ತನ್ನ ಸ್ನೇಹಿತ ಗಣೇಶ್ ಜೊತೆ ಬಂದು ಹಲ್ಲೆ ನಡೆಸಿದ್ದಾನೆ. ಹಲ್ಲೆ ನಡೆಸುತ್ತಿರುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.
ವಿದ್ಯಾರ್ಥಿ ಮೇಲೆ ಮನಬಂದಂತೆ ಹಲ್ಲೆ ನಡೆಸುತ್ತಿರುವುದನ್ನು ಕಂಡು ಕಾಲೇಜಿನ ಬಸ್ ಚಾಲಕರು ರಕ್ಷಿಸಿದ್ದಾರೆ. ನಂತರ ಹಲ್ಲೆ ನಡೆಸುತ್ತಿದ್ದ ಮನೋಜ್ ನನ್ನು ಹಿಡಿದು ಕಾಲೇಜು ಮುಖ್ಯಸ್ಥಿರಿಗೆ ಒಪ್ಪಿಸಿದ್ದಾರೆ. ಈ ಸಂದರ್ಭದಲ್ಲಿ ಆತನ ಸ್ನೇಹಿತ ಗಣೇಶ್ ಪರಾರಿಯಾಗಿದ್ದಾನೆ. ಘಟನೆ ಕುರಿತು ಹಲ್ಲೆಗೊಳಗಾದ ಜಯವರ್ದನ್ ಪೋಷಕರಿಂದ ಎನ್ಇಪಿಎಸ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಈ ಕುರಿತು ಪೊಲೀಸರು ತನಿಖೆ ಕೈಗೊಂಡಿದ್ದಾರೆ.