ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಮಾವಿನಕಟ್ಟೆಯಲ್ಲಿರುವ ಅಮಾನತ್ ಕೋ ಆಪರೇಟಿವ್ ಸೊಸೈಟಿಯ ಸರ್ವ ಸದಸ್ಯರ 5ನೇ ವಾರ್ಷಿಕ ಮಹಾಸಭೆಯು ಆಗಸ್ಟ್ 28ರಂದು ನಡೆಯಲಿದೆ.
2023-24ನೇ ಸಾಲಿನ ಸರ್ವ ಸದಸ್ಯರ ವಾರ್ಷಿಕ ಮಹಾಸಭೆಯು ಮಾವಿನಕಟ್ಟೆಯಲ್ಲಿರುವ ಸಮುದಾಯ ಭವನದಲ್ಲಿ ಆ. 28ರಂದು ಬೆಳಿಗ್ಗೆ 10ಕ್ಕೆ ನಡೆಯಲಿದೆ. ಸಭೆಯ ಅಧ್ಯಕ್ಷತೆಯನ್ನು ಸೊಸೈಟಿಯ ಅಧ್ಯಕ್ಷ ಮಹಮ್ಮದ್ ರಫೀಕ್ ಗಂಗೊಳ್ಳಿ ವಹಿಸಲಿದ್ದು, ಸದಸ್ಯರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕೆಂದು ಸೊಸೈಟಿಯ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಗಣೇಶ ದೇವಾಡಿಗ ಪ್ರಕಟಣೆಯಲ್ಲಿ ಕೋರಿದ್ದಾರೆ. ಹೆಚ್ಚಿನ ಮಾಹಿತಿಗಾಗಿ ಫೋ.ನಂ. 08254-271286 ಅಥವಾ 7411341286ಗೆ ಸಂಪರ್ಕಿಸಲು ತಿಳಿಸಿದ್ದಾರೆ.