ರಾಜ್ಯದ ಹಲವೆಡೆ ವ್ಯಾಪಕವಾಗಿ ಮಳೆ ಸುರಿಯುತ್ತಿದ್ದು, ಜನರಿಗೆ ಎಚ್ಚರಿಕೆ ನೀಡಲಾಗಿದೆ.
ಚಳಿ, ಗಾಳಿ, ಜತೆಗೆ ವ್ಯಾಪಕ ಮಳೆಯಾಗುತ್ತಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬೆಳಗಾವಿ, ಕಲಬುರಗಿ, ವಿಜಯಪುರ, ಯಾದಗಿರಿ, ಶಿವಮೊಗ್ಗಕ್ಕೆ ಆರೆಂಜ್ ಅಲರ್ಟ್ ಘೋಷಿಸಲಾಗಿದ್ದು, ವ್ಯಾಪಕ ಮಳೆಯ ಮುನ್ಸೂಚನೆ ನೀಡಲಾಗಿದೆ.
ಅಲ್ಲದೇ, ಮೈಸೂರು, ಕೊಡಗು, ಹಾಸನ, ಚಿಕ್ಕಮಗಳೂರು, ರಾಯಚೂರು, ಕೊಪ್ಪಳ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಧಾರವಾಡ, ಬೀದರ್, ಗದಗ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ ಜಿಲ್ಲೆಗಳಲ್ಲಿಯೂ ಹೆಚ್ಚಿನ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣವಿದ್ದು, ಮಳೆಯಾಗುವ ಸಾಧ್ಯತೆ ಇದೆ. ಹೀಗಾಗಿ ಕರಾವಳಿ ಭಾಗದ ಜನರು ಸೇರಿದಂತೆ ಮಳೆಯಾಗುವ ಜಿಲ್ಲೆಗಳ ಜನರು ಎಚ್ಚರಿಕೆಯಿಂದ ಇರಬೇಕೆಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.


















