ಚಿಕ್ಕಬಳ್ಳಾಪುರ: ಪೇದೆಯೊಬ್ಬ ಪ್ರೀತಿಸಿ ವಂಚಿಸಿರುವ ಘಟನೆ ಬೆಳಕಿಗೆ ಬಂದಿದ್ದು, ವಿದ್ಯಾರ್ಥಿನಿ ಆತ್ಮಹತ್ಯೆ ಯತ್ನಿಸಿದ್ದಾರೆ.
ಪ್ರೀತಿಸಿ (Love case) ಮದುವೆ ಮಾಡಿಕೊಳ್ಳುವುದಾಗಿ ನಂಬಿಸಿ ದೈಹಿಕ ಸಂಪರ್ಕ ಬೆಳೆಸಿದ್ದ ಪೇದೆ ನಂತರ ಕೈಕೊಟ್ಟಿದ್ದಕ್ಕೆ ವಿದ್ಯಾರ್ಥಿನಿ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾಳೆ. ವಿದ್ಯಾರ್ಥಿನಿ ಆತ್ಮಹತ್ಯೆಗೆ ಯತ್ನಿಸುತ್ತಿದ್ದಂತೆ ಪೊಲೀಸ್ ಪೇದೆ ಕೂಡ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾನೆ.
ಪೊಲೀಸ್ ಪೇದೆ ತಿಮ್ಮಣ್ಣರಾಮಪ್ಪಭೂಸರೆಡ್ಡಿ ಎಂಬಾತನಿಂದ ಈ ವಂಚನೆ ನಡೆದಿರುವ ಆರೋಪ ಕೇಳಿ ಬಂದಿದೆ. ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ನಗರ ಪೊಲೀಸ್ ಠಾಣೆ ಪೇದೆಯಾಗಿದ್ದಾರೆ. ಪೊಲೀಸ್ ಪೇದೆ ಹಾಗೂ ಯುವತಿ ಶಿರಿಷಾ ಇಬ್ಬರನ್ನು ಚಿಕ್ಕಬಳ್ಳಾಪುರ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಯುವತಿ ಶಿರಿಷಾ ಗುಡಿಬಂಡೆ ತಾಲೂಕಿನ ಸೋಮೇನಹಳ್ಳಿ ನಿವಾಸಿಯಾಗಿದ್ದಾಳೆ. ಇವರಿಬ್ಬರು ಚಿಕ್ಕಬಳ್ಳಾಪುರ ಮುನಿಸಿಪಾಲ್ ಕಾಲೇಜಿನಲ್ಲಿ ಕರೆಸ್ಪಾಂಡೆನ್ಸ್‌ನಲ್ಲಿ ಪದವಿ ಮಾಡುತ್ತಿದ್ದರು. ಕಾಲೇಜಿನಲ್ಲಿ ಇಬ್ಬರಿಗೂ ಪರಿಚಯವಾಗಿತ್ತು. ನಂತರ ಈ ಪರಿಚಯ ಪ್ರೇಮಕ್ಕೆ ತಿರುಗಿತ್ತು. ಮದುವೆ ಮಾಡಿಕೊಳ್ಳುವುದಾಗಿ ಹೇಳಿ ದೈಹಿಕ ಸಂರ್ಪಕ ಬೆಳೆಸಿದ್ದ. ಆದರೆ ಮದುವೆ ಆಗು ಅಂದರೆ ಅಂತರ್ಜಾತಿ ಎಂಬ ನೆಪವೊಡ್ಡಿ ಮದುವೆಗೆ ವಿರೋಧ ವ್ಯಕ್ತಪಡಿಸಿದ್ದ. ಹೀಗಾಗಿ ಮನನೊಂದ ಯುವತಿ ಆತ್ಮಹತ್ಯೆಗೆ ಯತ್ನಿಸಿದ್ದಾಳೆ ಎನ್ನಲಾಗಿದೆ. ಈ ಸುದ್ದಿ ಕೇಳಿ ಪೊಲೀಸ್ ಪೇದೆ ಕೂಡ ಆತ್ಮಹತ್ಯೆಗೆ ಯತ್ನಿಸಿದ್ದಾನೆ