2025 ರ ಐಪಿಎಲ್ ತಯಾರಿ ಈಗಿನಿಂದಲೇ ಶುರುವಾಗಿದೆ. ಈ ಮಧ್ಯೆ ಕನ್ನಡಿಗ ಕೆ.ಎಲ್. ರಾಹುಲ್ ಲಕ್ನೋ ಸೂಪರ್ ಜೈಂಟ್ಸ್ ತಂಡ ತೊರೆಯಲಿದ್ದಾರೆ ಎಂಬ ಮಾತು ಕೇಳಿ ಬಂದಿದ್ದವು. ಈ ಮಧ್ಯೆ ತಂಡದ ಮಾಲೀಕರು ಎಲ್ಲದಕ್ಕೂ ಸ್ಪಷ್ಟನೆ ನೀಡಿದ್ದಾರೆ.
ಈಗಾಗಲೇ ತಂಡದ ಮೆಂಟರ್ ಆಗಿ ಭಾರತೀಯ ಕ್ರಿಕೆಟ್ ತಂಡದ ಮಾಜಿ ವೇಗಿ ಜಹೀರ್ ಖಾನ್ ಆಯ್ಕೆಯಾಗಿದ್ದಾರೆ. ಈ ಸಂದರ್ಭದಲ್ಲಿಯೇ ಲಕ್ನೋ ಸೂಪರ್ ಜೈಂಟ್ಸ್ ಫ್ರಾಂಚೈಸಿಯ ಮಾಲೀಕ ಸಂಜೀವ್ ಗೋಯೆಂಕಾ ಅವರು ಎಲ್ಲ ಊಹಾಪೋಹಗಳಿಗೆ ತೆರೆ ಎಳೆದಿದ್ದಾರೆ. ಕೆ.ಎಲ್. ರಾಹುಲ್ ನಮ್ಮ ಕುಟುಂಬದ ಸದಸ್ಯರಿದ್ದಂತೆ. ಅವರು ನಮ್ಮ ತಂಡದ ಅವಿಭಾಜ್ ಅಂಗ ಎಂದು ಹೇಳಿದ್ದಾರೆ. ಈ ಮೂಲಕ ಎಲ್ಲ ರಾಹುಲ್ ತಂಡದಲ್ಲಿಯೇ ಉಳಿಯಲಿದ್ದಾರೆ ಎಂದು ಅವರು ಹೇಳಿದ್ದು, ರಾಹುಲ್, ಬೆಂಗಳೂರು ತಂಡ ಸೇರಲಿದ್ದಾರೆ ಎಂಬ ವದಂತಿ ಕೂಡ ಸುಳ್ಳಾದಂತಾಗಿದೆ.
ಸನ್ ರೈಸರ್ಸ್ ಹೈದರಾಬಾದ್ ವಿರುದ್ಧದ ಪಂದ್ಯದಲ್ಲಿ ತಂಡದ ಕಳಪೆ ಪ್ರದರ್ಶನಕ್ಕೆ ಮಾಲೀಕ ಸಂಜೀವ್ ಗೋಯೆಂಕಾ, ತಂಡದ ನಾಯಕ ಕೆಎಲ್ ರಾಹುಲ್ ರನ್ನು ಬಹಿರಂಗವಾಗಿಯೇ ನಿಂಧಿಸಿದ್ದರು. ಹೀಗಾಗಿ ರಾಹುಲ್ ಮುಂದಿನ ಆವೃತ್ತಿಯಲ್ಲಿ ಈ ತಂಡದ ಪರ ಆಡುವುದು ಅನುಮಾನ ಎನ್ನಲಾಗಿತ್ತು. ಆದರೆ, ಈಗ ರಾಹುಲ್ ರನ್ನು ಭೇಟಿ ಮಾಡುವ ಮೂಲಕ ಗೋಯೆಂಕಾ ಎಲ್ಲ ಗೊಂದಲಕ್ಕೆ ತೆರೆ ಎಳೆದಿದ್ದಾರೆ. ಆದರೆ, ತಂಡದ ನಾಯಕತ್ವವನ್ನು ರಾಹುಲ್ ವಹಿಸಿಕೊಳ್ಳಲಿದ್ದಾರಾ ಎಂಬುವುದು ಮಾತ್ರ ಸ್ಪಷ್ಟವಾಗಿಲ್ಲ.